Thursday, June 25, 2026
Google search engine
Homeಅಪರಾಧರಾಜ್ಯದ ಪ್ರತಿಷ್ಠಿತ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ರಾಜ್ಯದ ಪ್ರತಿಷ್ಠಿತ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲ್ಯಾಕ್‌ಮೇಲ್ ಮಾಡಿದ ಮಹಿಳೆಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ವಾಮೀಜಿಗೆ ಬ್ಲಾಕ್ ಮೇಲ್ ಮಾಡಿ 4.5 ಲಕ್ಷ ರೂ. ವಸೂಲು ಮಾಡಿದ್ದ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.

ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಮಹಿಳೆ ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು. ಇದರಿಂದ ಬೇಸತ್ತ ಸ್ವಾಮೀಜಿ ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದು, ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ 4.5 ಲಕ್ಷ ರೂ. ವಸೂಲು ಮಾಡಿದ್ದ ಸ್ಫೂರ್ತಿ  ನಂತರ  1 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಳು. ಆದರೆ ಯಾವ ಕಾರಣಕ್ಕೆ ಬ್ಲಾಕ್ ಮೇಲ್ ಮಾಡಿದ್ದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.

2 ವರ್ಷ ಹಿಂದೆ ಹನಿಟ್ರ್ಯಾಪ್ ಭೀತಿ ಎದುರಿಸಿದ್ದ ಸ್ವಾಮೀಜಿ

ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಬ್ಲ್ಯಾಕ್​ಮೇಲ್ ಕಾಟ ಎದುರಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments