ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇತ್ತೀಚೆಗಷ್ಟೇ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮಂಜುನಾಥ ಪೂಜಾರಿ ಗುರುವಾರ ಸರಳವಾಗಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ತಳ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯದಂತೆ ಉತ್ತಮವಾಗಿ ಸೇವೆ ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುವುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ನಿಗಮದ ಪ್ರಭಾರಿ ವ್ಯವಸ್ಥಾಪಕ ನಿರ್ದೇಶಕ ಡಾ. ರಾಜೀವ ಎನ್.ಕೂಲೇರ ಹಾಗೂ ಸಿಬ್ಬಂದಿ ಹಾಜರಿದ್ದರು. ನಂತರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಅವರ ಆರ್ ಟಿ ನಗರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.



