Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕಾನೂನು

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ರಾಜೀವ್ ಗೌಡ ಜಾಮೀನು ಅರ್ಜಿ ವಜಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
rajeev gowda

ಬೆಂಗಳೂರು: ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧ ರಾಜೀವ್ ಗೌಡನ ಜಾಮೀನು ಅರ್ಜಿ ವಜಾಗೊಂಡಿದೆ.

ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಬಳ್ಳಾಪುರ 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.

ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಬೆ ಆಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಸಹ ಹಾಕಿದ್ದು, ಈ ಸಂಬಂಧ ಅಮೃತಾ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣ ಸಂಬಂಧ ಜಮೀನಿಗಾಗಿ ರಾಜೀವ್ ಗೌಡ ಚಿಕ್ಕಬಳ್ಳಾಪುರ 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಆರೋಪಿ ರಾಜೀವ್ ಗೌಡ ಪರ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದರೆ, ದೂರುದಾರೆ ಪರ ಪಿಪಿ ಸುಮತಿಶಾಂತಾ ಮೇರಿ ವಾದ ಮಂಡಿಸಿದ್ದರು. ಎರಡು ಕಡೆಯಿಂದ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್​, ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ನಾಲ್ಕು ನೋಟಿಸ್ ಜಾರಿ:

ಪೌರಾಯುಕ್ತೆಗೆ ನಿಂದಿಸಿರುವ ಪ್ರಕರಣದಲ್ಲಿ ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸರು ನಾಲ್ಕು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ಮನೆಗಳಿಗೆ ಬೀಗ ಜಡಿದು ರಾಜೀವ್ ಗೌಡ ತಲೆಮೆರೆಸಿಕೊಂಡಿದ್ದಾರೆ. ಅವರ ಪತ್ನಿ ಸಹನಾ ಕೂಡ ಮನೆಯಲ್ಲಿ ಇಲ್ಲವೆಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರೂ ಸಹ ಸುಳಿವು ಸಿಕ್ಕಿಲ್ಲ.

ಹೈಕೋರ್ಟ್​​​ನಲ್ಲೂ ಅರ್ಜಿ ವಜಾ

ಇನ್ನು ಪ್ರಕರಣ ರದ್ದುಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ಸಹ ಹೈಕೋರ್ಟ್​​ನಲ್ಲಿ ವಜಾಗೊಂಡಿದೆ. ಒಮ್ಮೆ ಮಾತನಾಡಿದರೆ ವಾಪಸ್ ಪಡೆಯಲು ಆಗುವುದಿಲ್ಲ. ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳು ಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ಹೈಕೋರ್ಟ್​​ ತರಾಟೆ ತೆಗೆದುಕೊಂಡಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment