Saturday, May 30, 2026
Google search engine
Homeದೇಶ10,000 ಕೆಜಿ ಸ್ಫೋಟಕ ರಾಜಸ್ಥಾನದಲ್ಲಿ ಪತ್ತೆ: ದೇಶದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯ ಸಂಚು ವಿಫಲ?

10,000 ಕೆಜಿ ಸ್ಫೋಟಕ ರಾಜಸ್ಥಾನದಲ್ಲಿ ಪತ್ತೆ: ದೇಶದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯ ಸಂಚು ವಿಫಲ?

ಸುಮಾರು 10,000 ಕೆಜಿ ಸ್ಫೋಟಕಗಳು ಮತ್ತು ಡಿಟೋನೇಟರ್‌ಗಳು ರಾಜಸ್ಥಾನದಲ್ಲಿ ಪತ್ತೆಯಾಗಿದ್ದು, ದೇಶದ ಇತಿಹಾಸದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ 10,000 ಕೆಜಿ ಸ್ಫೋಟಕಗಳು (Explosives), ಡಿಟೋನೇಟರ್‌ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಳೆದ ವರ್ಷ ಕೆಂಪುಕೋಟೆ ಸಮೀಪ ಉಂಟಾದ ಕಾರು ಬಾಂಬ್‌ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಳ್ಳಲಾಗಿತ್ತು. ಆದರೆ ರಾಜಸ್ಥಾನದಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದೆ.

ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ತೋಟದ ಮನೆಯಲ್ಲಿ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನ ವಶಪಡಿಸಿಕೊಂಡಿದ್ದು, ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ರಾಜಸ್ಥಾನ ಪೊಲೀಸರು ಹರ್ಸೌರ್‌ನ ತೋಟದ ಮನೆಯೊಂದರ ಮೇಲೆ ದಾಳಿ ಮಾಡಿದಾಗ 187 ಚೀಲಗಳಲ್ಲಿ ತುಂಬಿಟ್ಟಿದ್ದ ಒಟ್ಟು 9,550 ಕೆಜಿ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಫೋಟಕಗಳ ಜೊತೆಗೆ ಭಾರೀ ಪ್ರಮಾಣದ ಸ್ಫೋಟಕ ಪರಿಕರಗಳನ್ನೂ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 9 ಪೆಟ್ಟಿಗೆಗಳಲ್ಲಿ ಡಿಟೋನೇಟರ್‌ಗಳು, 12 ಪೆಟ್ಟಿಗೆ & 15 ಬಂಡಲ್‌ಗಳಷ್ಟು ನೀಲಿ ಫ್ಯೂಸ್ ವೈರ್, 12 ಪೆಟ್ಟಿಗೆ & 5 ಬಂಡಲ್‌ಗಳ ಕೆಂಪು ಫ್ಯೂಸ್ ವೈರ್ ಗಳನ್ನೂ ವಶಕ್ಕೆ ಪಡೆಯಲಾಗಿದೆ. ನಂತರ ದಾಳಿ ವೇಳೆ ಸ್ಥಳದಲ್ಲಿದ್ದ ಸುಲೇಮಾನ್ ಖಾನ್ ಎಂಬಾತನನ್ನ ಬಂಧಿಸಲಾಗಿದೆ. ಆತನ ವಿರುದ್ಧ ಮೂರು ಕ್ರಿಮಿನಲ್‌ ಪ್ರಕರಣಗಳಿವೆ.

ಬಂಧಿತನ ವಿರುದ್ಧ ಸ್ಫೋಟಕ ಕಾಯ್ದೆ 1884, ಸ್ಫೋಟಕ ವಸ್ತುಗಳ ಕಾಯ್ದೆ 1908 ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಗೌರ್ ಎಸ್ಪಿ ಮೃದುಲ್ ಕಚ್ಛವಾ ಮಾಹಿತಿ ಹಂಚಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments