ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿ ಮಾಡಿ ಬೆದರಿಕೆ ಹಾಕಿದ ಆರೋಪದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷನನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಮೇಗೌಡ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಗರ್ಭಿಣಿಯಾಗಿರುವ ವಿಷಯ ಮನೆಯಲ್ಲಿ ತಿಳಿಯುತ್ತಿದ್ದಂತೆ ಪೊಲೀಸರಿಗೆ ದೂರು ನೀಡಲಾಗಿದೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ರಾಮೇಗೌಡ, ವಿಷಯ ಬಾಯ್ಬಿಡದಂತೆ ಬೆದರಿಕೆ ಹಾಕಿದ್ದ. ಇದರಿಂದ ಬಾಲಕಿ ತನ್ನ ಮೇಲಿನ ದೌರ್ಜನ್ಯವನ್ನು ಯಾರಿಗೂ ಹೇಳದೇ ಸುಮ್ಮನಿದ್ದಳು. ಆದರೆ ಗರ್ಭವತಿಯಾಗುತ್ತಿದ್ದಂತೆ ಮನೆಯಲ್ಲಿ ವಿಷಯ ಗೊತ್ತಾಗಿದೆ.
ಸಂತ್ರಸ್ತೆಯ ಕುಟುಂಬ ರಾಮೇಗೌಡ ವಿರುದ್ಧ ಬಂಗಾರಪೇಟೆ ಠಾಣೆಯಲ್ಲಿ ದೂರು ನೀಡಿದ ಬೆನ್ನಲ್ಲೇ ಬಂಗಾರಪೇಟೆ ಠಾಣೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು, ರಾಮೇಗೌಡನನ್ನು ಬಂಧಿಸಿ ನ್ಯಾಯಾಲಯ ವಶಕ್ಕೆ ನೀಡಿದ್ದಾರೆ.



