ಶಾಲೆಯಲ್ಲಿ ಮಕ್ಕಳಿಗೆ ಪೌಷ್ಠಿಕಾಂಶದ ಅಂಗವಾಗಿ ನೀಡಲಾಗಿದ್ದ ವಿಟಮಿನ್ ಮಾತ್ರೆ ಸೇವಿಸಿದ 59 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯಲ್ಲಿ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಖನಿಜಾಂಶದ ಮಾತ್ರೆ ನೀಡಲಾಗಿತ್ತು. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ ಖನಿಜಾಂಶದ ಮಾತ್ರೆಯನ್ನು ನೀಡಲಾಗುತ್ತಿತ್ತು.
ಮಂಗಳವಾರ ಕೂಡ ಖನಿಜಾಂಶ ಯುಕ್ತ ಮಾತ್ರೆಯನ್ನು ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗಿತ್ತು. ಈ ಮಾತ್ರೆಯನ್ನು ಸೇವಿಸಿದ್ದಂತಿಂದ 59 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಊಟದ ನಂತರ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ ಮಕ್ಕಳು ಅಸ್ವಸ್ಥ ಆಗಿರುವುದಾಗಿ ಹೇಳಲಾಗುತ್ತಿದ್ದು, 6ನೇ ತರಗತಿ ಮಕ್ಕಳೇ ಹೆಚ್ಚು ಅಸ್ವಸ್ಥರಾಗಿದ್ದಾರೆ. 20 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಊಟದ ಮೇಲೆ ಮಕ್ಕಳಿಗೆ ರಕ್ತ ಅಭಿವೃದ್ಧಿಗಾಗಿ ಎಫ್ ಎಕ್ಸ್ ಟಾನಿಕ್ ನೀಡಬೇಕೆಂದು ಸರ್ಕಾರದ ಆದೇಶವಿದೆ.
ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಟಾನಿಕ್ ನೀಡಿದ ಮೇಲೆ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥಗೊಂಡ ಮಕ್ಕಳನ್ನ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.



