Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬಳ್ಳಾರಿ ಪಾಲಿಕೆ ಅಕ್ರಮ: ಮೂವರ ವಿರುದ್ಧ ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಸಚಿವ ಬೈರತಿ ಸುರೇಶ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
byrati suresh

ವಿಧಾನಪರಿಷತ್ತು: ತೆರಿಗೆ ಪಾವತಿದಾರರಿಗೆ ನಕಲಿ ರಸೀದಿ ನೀಡಿ ಅವ್ಯವಹಾರ ನಡೆಸಿರುವ ಆರೋಪದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೂವರು ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶ ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ವೈ.ಎಂ.ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನ 35 ಫ್ಲ್ಯಾಟ್ ಮಾಲೀಕರಿಂದ 2,80,179 ರಾಉಪಾಯಿಗಳ ತೆರಿಗೆ ಪಾವತಿಸಿಕೊಳ್ಳಲಾಗಿದೆ. ಆದರೆ, ಈ ಹಣವನ್ನು ಪಾಲಿಕೆ ಖಾತೆಗೆ ಜಮಾ ಮಾಡದೇ, ದುರ್ಬಳಕೆ ಮಾಡಿಕೊಳ್ಳಲಾಗಿದೆ ಮತ್ತು ಇದಕ್ಕೆ ಬಳ್ಳಾರಿ ಒನ್ ಹೆಸರಿನಲ್ಲಿ ನಕಲಿ ರಸೀದಿಗಳನ್ನು ಸೃಷ್ಟಿಸಿ ಫ್ಲ್ಯಾಟ್ ಮಾಲೀಕರಿಗೆ ನೀಡಿರುವುದು ಕಂಡು ಬಂದಿರುತ್ತದೆ ಎಂದು ತಿಳಿಸಿದರು.

ಈ ಹಣವನ್ನು ಶೇ.18 ರ ಬಡ್ಡಿಯೊಂದಿಗೆ ತಪ್ಪಿತಸ್ಥರಿಂದ ಪಾವತಿಸಿಕೊಳ್ಳಲಾಗಿದೆ. ಅಲ್ಲದೇ, ತಪ್ಪಿತಸ್ಥರಾದ ಸಹಾಯಕ ಕಂದಾಯ ಅಧಿಕಾರಿ ಎನ್.ವೀರೇಶ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಮನೋಹರ ಮತ್ತು ದ್ವಿತೀಯ ದರ್ಜೆ ಸಹಾಯಕ ಕೆ.ದೊಡ್ಡಬಸಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಇದಲ್ಲದೇ, ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ದಾವಣಗೆರೆಯ ನಿವೃತ್ತ ನ್ಯಾಯಾಧೀಶರಾದ ಈಶ್ವರ್ ಜಂತ್ಲಿ ನೇತೃತ್ವದ ವಿಚಾರಣಾ ಆಯೋಗವನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ವಿಚಾರಣೆ ಆಯೋಗದ ವರದಿ ಬಂದ ನಂತರ ತಪ್ಪಿತಸ್ಥ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ನೀರು ಸಂಸ್ಕರಣಾ ಘಟಕ ನಿರ್ಮಾಣ

ಆಡಳಿತಾರೂಢ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಒಳಚರಂಡಿ ಯೋಜನೆಯಡಿ ಮಲಿನ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮಲಿನ ನೀರು ಸಂಸ್ಕರಣಾ ಘಟಕಗಳ ಮತ್ತು ವೆಟ್ ವೆಲ್ ಘಟಕಗಳ ನಿರ್ಮಾಣಕ್ಕೆ ಅಗತ್ಯವಿರುವ ಖಾಸಗಿ ಜಮೀನುಗಳನ್ನು ಸ್ಥಳೀಯ ಸಂಸ್ಥೆಗಳ ವತಿಯಿಂದ ಸ್ವಾಧೀನಪಡಿಸಿಕೊಂಡು ಹಸ್ತಾಂತರ ಮಾಡುವ ವಿಚಾರದಲ್ಲಿ ವಿಳಂಬ ಉಂಟಾಗಿದೆ. ಈ ಕುರಿತು ಸದ್ಯದಲ್ಲಿಯೇ ಉನ್ನತಾಧಿಕಾರಿಗಳ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment