Wednesday, June 24, 2026
Google search engine
Homeಜಿಲ್ಲಾ ಸುದ್ದಿಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್ ಡಿ) ಸೋಂಕಿಗೆ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮಣಿಪಾಲದಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಯುವಕ ಜನವರಿ 20 ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯುವಕ ಕೊನೆಯುಸಿರೆಳೆದಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments