Saturday, June 27, 2026
Google search engine
Homeರಾಜ್ಯಜಿ ರಾಮ್ ಜಿ ಖಂಡನಾ ನಿರ್ಣಾಯ ಅಂಗೀಕಾರ: ವಿಶೇಷ ವಿಧಾನಸಭೆ ಅಧಿವೇಶನ ಮುಂದೂಡಿಕೆ

ಜಿ ರಾಮ್ ಜಿ ಖಂಡನಾ ನಿರ್ಣಾಯ ಅಂಗೀಕಾರ: ವಿಶೇಷ ವಿಧಾನಸಭೆ ಅಧಿವೇಶನ ಮುಂದೂಡಿಕೆ

ಬೆಂಗಳೂರು: ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)’ ಕಾಯ್ದೆಯನ್ನು ಖಂಡಿಸಿ ನಿರ್ಣಯ ಅಂಗೀಕಾರದೊಂದಿಗೆ ವಿಧಾನಸಭೆ ವಿಶೇಷ ಅಧಿವೇಶನಕ್ಕೆ ತೆರೆ ಬಿದ್ದಿತು.

ವಿಶೇಷ ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದರು. ಇದನ್ನು ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಧ್ವನಿ ಮತದ ಮೂಲಕ ನಿರ್ಣಯಕ್ಕೆ ಅಂಗೀಕರಿಸಿದರು.

ವಿವಾದತಿ ಕಾಯ್ದೆ ಖಂಡಿಸಿ ನಿರ್ಣಯ ಅಂಗೀಕಾರವಾಗುತ್ತಿದ್ದಂತೆ ಸ್ಪೀಕರ್ ವಿಧಾನಸಭೆ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಇದೇ ವೇಳೆ ಮುಖ್ಯಮಂತ್ರಿಗಳ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಬುಧವಾರ ಮೇಲ್ಮನೆಯಲ್ಲಿ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)’ ಕಾಯ್ದೆಯನ್ನು  ರದ್ದು ಪಡಿಸಿ ಮತ್ತು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ನಿರ್ಣಯ ಮಂಡಿಸಿದರು.

ಭಾರತದ ಪ್ರಜಾಸತ್ರೆಯ ಭದ್ರ ಬುನಾದಿಯಾದ ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಅಧಿಕಾರ ವಿಕೇಂದ್ರೀಕರಣದ ತತ್ತ್ವಗಳಿಗೆ ತನ್ನ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಗ್ರಾಮೀಣ ಬಡವರ ಪಾಲಿನ ‘ಸಂಜೀವಿನಿ’ಯಾಗಿದ್ದ ಮತ್ತು ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿದ್ದ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ‘ಯನ್ನು (ಮನರೇಗಾ) ರದ್ದುಗೊಳಿಸಿರುವುದನ್ನು ಈ ಸದನವು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ.

ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಜಾರಿಗೆ ತಂದಿರುವ ಹೊಸ ‘ವಿಬಿ-ಗ್ರಾಮ್ ಜಿ’ ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಗಳಿಗೆ ಮತ್ತು ಗ್ರಾಮೀಣ ಜನರ ಜೀವನೋಪಾಯದ ಹಕ್ಕಿಗೆ ಮಾರಕವಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ -ದೃಷ್ಟಿಯಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವು ಹೊರೆ ಉಂಟುಮಾಡುವ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯನ್ನು ಕೇಂದ್ರ ಸರ್ಕಾರವು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮ ಪಂಚಾಯತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು.

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ (ಮನರೇಗಾ) ಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ತಿಳಿಸಿದರು.ಕೇಂದ್ರ ಸರ್ಕಾರಕ್ಕೆ ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೆ ನಿರ್ಣಯವನ್ನು ಕಳುಹಿಸಿಕೊಡಬೇಕೆಂದು ನಿರ್ಣಯಿಸಿರುವುದನ್ನು ಸದನದಲ್ಲಿ ಮಂಡಿಸಿದರು..

ನಿರ್ಣಯವನ್ನು ವಿರೋಧಿಸಿ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ನ ಭೋಜೇಗೌಡ, ಬಿಜೆಪಿಯ ನವೀನ್, ರವಿಕುಮಾರ್, ಪೂಜಾರ್, ಹೇಮಲತಾ ನಾಯಕ್ ಮತ್ತಿತರರು ಮಾತನಾಡಿ ಉದ್ಯೋಗದ ದಿನಗಳನ್ನು ಹೆಚ್ಚಿಸಿ ಭ್ರಷ್ಟಾಚಾರವನ್ನು ಹತ್ತಿಕ್ಕುವ ಸಾಮಾಜಿಕ ನ್ಯಾಯ ಒದಗಿಸಲು  ವಿಬಿ-ಜಿ ರಾಮ್ ಜಿ ಅತ್ಯುತ್ತಮವಾಗಿ ಎಂದು ಬಣ್ಣಿಸಿದರು.

ಆಡಳಿತ ಪಕ್ಷದ ಸಭಾನಾಯಕ ಭೋಸರಾಜ್, ಸದಸ್ಯರಾದ ಸುಧಾಮ್ ಸಿಂಗ್ ರಮೇಶ್ ಬಾಬು, ಎಸ್ .ರವಿ ಮತ್ತಿತರು ರಾಜ್ಯ ಸರ್ಕಾರದ ನಿರ್ಣಯವನ್ನು ಬೆಂಬಲಿಸಿ ಮನರೇಗಾ ಹೆಸರು ಬದಲಾವಣೆ ಮಾಡಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ. ರಾಜ್ಯದ ಅನುದಾನವನ್ನು ಹೆಚ್ಚಿಸಿ ಅಸಮರ್ಪಕ ರೀತಿಯಲ್ಲಿ ವಿಬಿ-ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದ್ದು ತಕ್ಷಣವೇ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments