14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ 19 ವರ್ಷದೊಳಗಿನವ ಏಕದಿನ ವಿಶ್ವಕಪ್ ನಲ್ಲಿ ಅತ್ಯಂತ ವೇಗದ ಶತಕ ಸೇರಿದಂತೆ 80 ಎಸೆತಗಳಲ್ಲಿ 175 ರನ್ ಸಿಡಿಸಿ ಹಲವು ವಿಶ್ವದಾಖಲೆ ನಿರ್ಮಿಸಿದ್ದಾರೆ.
ಹರಾರೆಯಲ್ಲಿ ಶುಕ್ರವಾರ ನಡೆದ ಫೈನಲ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವೈಭವ್ ಸೂರ್ಯವಂಶಿ ಆರ್ಭಟದ ನೆರವಿನಿಂದ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ.
ವೈಭವ್ ಸರ್ಯವಂಶಿ 55 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ 60ಕ್ಕೂ ಕಡಿಮೆ ಎಸೆತಗಳಲ್ಲಿ ಅತೀ ಹೆಚ್ಚು ಬಾರಿ (3) ಶತಕ ಪೂರೈಸಿದ ಆಟಗಾರ ಎನಿಸಿಕೊಂಡರು. ಆದರೆ 52 ಎಸೆತಗಳಲ್ಲಿ ಶತಕ ಗಳಿಸಿರುವ ತಮ್ಮದೇ ದಾಖಲೆ ಮುರಿಯಲು ವಿಫಲರಾದರು.
80 ಎಸೆತಗಳಲ್ಲಿ 15 ಬೌಂಡರಿ ಮತ್ತು 15 ಸಿಕ್ಸರ್ ಒಳಗೊಂಡ 175 ರನ್ ಸಿಡಿಸಿದರು. ಈ ಮೂಲಕ ಅಂಡರ್ 19 ವಿಶ್ವಕಪ್ ಫೈನಲ್ ನಲ್ಲಿ ಗರಿಷ್ಠ ರನ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು.
ವೈಭವ್ ಸೂರ್ಯವಂಶಿ 15 ಸಿಕ್ಸರ್ ಸಿಡಿಸಿರುವುದು ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸರ್ ಗಳಿಸಿದ ಆಟಗಾರ ಎನಿಸಿಕೊಂಡರು. ಅಲ್ಲದೇ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟಾರೆ 20 ಸಿಕ್ಸರ್ ಬಾರಿಸಿ ಈ ಹಿಂದೆ 14 ಸಿಕ್ಸರ್ ದಾಖಲೆಯನ್ನು ಮುರಿದರು.



