Thursday, June 25, 2026
Google search engine
Homeರಾಜ್ಯಆಗುಂಬೆ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಟರ್‌ ಆಹ್ವಾನಿಸಿದ ಕೇಂದ್ರ

ಆಗುಂಬೆ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಟರ್‌ ಆಹ್ವಾನಿಸಿದ ಕೇಂದ್ರ

ಮಲೆನಾಡು-ಕರಾವಳಿ ಸಂಪರ್ಕದ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿ ರಸ್ತೆ ಮೇಲ್ದರ್ಜೆಗೇರಿಸಲು ಹಾಗೂ ಸುರಂಗ ಮಾರ್ಗದ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿದೆ.

ಕೇಂದ್ರ ಸರ್ಕಾರ ಈ ಯೋಜನೆಗೆ 2.33 ಕೋಟಿ ರೂ. ಮೀಸಲಿಟ್ಟಿದ್ದು, ಕುರಿತು ಸರ್ವೆ ನಡೆಸಿ ಡಿಪಿಆರ್​​ ಸಲ್ಲಿಕೆಗೆ ಕೇಂದ್ರ ಸರ್ಕಾರ 2.33 ಕೋಟಿ ರೂ. ಮೀಸಲಿಟ್ಟಿದ್ದು, ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಟೆಂಡರ್ ಆಹ್ವಾನಿಸಿದೆ.

ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ ಭೌತಶಾಸ್ತ್ರಜ್ಞರ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿದೆ. ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಲು, ವಿವರವಾದ ಭೂ ತಾಂತ್ರಿಕ ತನಿಖೆಗಳಿಗೆ ಮೀಸಲಾದ ಬಜೆಟ್ ನಿಬಂಧನೆಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ.

ದಶಕಗಳಿಂದಲೂ ಬಾಕಿ ಉಳಿದಿದ್ದ ಆಗುಂಬೆ ಘಾಟ್ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಸ್ಪಷ್ಟ, ನಿರ್ಣಾಯಕ ಮತ್ತು ಆಡಳಿತಾತ್ಮಕವಾಗಿ ಮೊದಲ ಹೆಜ್ಜೆಯಾಗಿದೆ. ಈ ಪ್ರದೇಶವು ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಜೊತೆಗೆ ಅಪಾಯಕಾರಿ ಹಾಗೂ ಅಪಘಾತಗಳಿಗೆ ಹೆಸರಾದ ಆಗುಂಬೆ ಘಾಟ್ ರಸ್ತೆಯ ಸುರಕ್ಷತೆ ಹೆಚ್ಚಿಸುವುದು, ಪಶ್ಚಿಮ ಘಟ್ಟ ಪ್ರದೇಶದ ಪ್ರಕೃತಿ ಸಂವೇದನಾಶೀಲತೆಗೆ ಗೌರವ ನೀಡುತ್ತಲೇ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಕೇಂದ್ರ ಸರ್ಕಾರ ಆಗುಂಬೆ ಘಾಟ್‌ ರಸ್ತೆಯ ಅಭಿವೃದ್ಧಿ ಹಾಗೂ ಸುರಂಗ ಮಾರ್ಗದ ಕಾಮಗಾರಿಗೆ ಟೆಂಡರ್‌ ಆಹ್ವಾನಿಸಿರುವುದಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.
ಕೇಂದ್ರ ಸರ್ಕಾರ ಆಗುಂಬೆ ಘಾಟಿಯ ಸುರಂಗ ಮಾರ್ಗದ ಕುರಿತು ಡಿಪಿಆರ್ ಸಲ್ಲಿಕೆಗೆ ಆಸಕ್ತಿ ತೋರಿರುವುದರಿಂದ ಮಲೆನಾಡಿಗೆ ಕರಾವಳಿ ಜತೆ ಇನ್ನೂ ಹತ್ತಿರವಾಗಲು ಸಾಧ್ಯವಾಗಲಿದೆ. ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಣಯವು ಸುರಕ್ಷಿತ, ಸುಗಮ ಸಂಪರ್ಕ ಕಲ್ಪಿಸುವ ಜತೆಗೆ ಮಲೆನಾಡು-ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ಹಾಗೂ ವೇಗ ನೀಡುವ ಕ್ರಮ ಎಂದು ಶ್ಲಾಘಿಸಿದ್ದಾರೆ.

ಡಿಪಿಆರ್ ಪ್ರಕ್ರಿಯೆ ಆರಂಭವಾಗಿರುವುದು ಗಮನಿಸಿದರೆ ಈ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದನ್ನು ಬಗ್ಗೆ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಮತ್ತು ಕಾಲಮಿತಿಯೊಳಗೆ ಮುಗಿಸುವ ಬದ್ಧತೆಯನ್ನು ತೋರುತ್ತದೆ. ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳು, ರೈತರು, ಅಕ್ಕಪಕ್ಕದ ಜಿಲ್ಲೆಗಳು, ಪ್ರವಾಸೋದ್ಯಮ ಹಾಗೂ ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ ಎಂದು ರಾಘವೇಂದ್ರ ಹೇಳಿದ್ದಾರೆ.

ಈ ಮಹತ್ವದ ನಿರ್ಧಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಕೃತಜ್ಞತೆಗಳು. ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ನಿರಂತರ ಸಂಯೋಜನೆ ಮುಂದುವರೆಸುತ್ತೇನೆ. ಭೂ ಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ಈ ಬಹುಕಾಲದ ಮಹತ್ವಪೂರ್ಣ ಯೋಜನೆ, ಯೋಜನಾ ಹಂತದಿಂದ ಕಾರ್ಯರೂಪಕ್ಕೆ ಶೀಘ್ರವಾಗಿ ಸಾಗಲಿ ಎಂಬುದು ಎಲ್ಲರ ಆಶಯ ಎಂದು ಸಂಸದ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments