Saturday, May 16, 2026
Google search engine
Homeರಾಜ್ಯಬೆಳ್ಳಂಬೆಳ್ಳಗೆ ಬೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳ್ಳಂಬೆಳ್ಳಗೆ ಬೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗದಲ್ಲಿ ಬೆಸ್ಕಾಂ ಎಇಇ ಅರ್ಜುನ ನಿವಾಸ, ಫಾರ್ಮ್‌ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಸ್ಕಾಂ ಸಿವಿಲ್ ವಿಭಾಗದ ಎಇಇ ಆಗಿರುವ ಅರ್ಜುನ ಆರ್.ಹೆಚ್. ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ವಿಜಯನಗರ ಮತ್ತು ಗೋಪಾಲಗೌಡ ಬಡಾವಣೆಯಲ್ಲಿರುವ ಅವರ ನಿವಾಸಗಳ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಸಾಗರ ತಾಲೂಕಿನ ಆನಂದಪುರ ಸಮೀಪದ ತಳಲೆ ಗ್ರಾಮದಲ್ಲಿರುವ ಅರ್ಜುನ ಅವರಿಗೆ ಸೇರಿದ 2.5 ಎಕರೆ ಮತ್ತು 4.5 ಎಕರೆ ವಿಸ್ತೀರ್ಣದ ಬೃಹತ್ ಫಾರ್ಮ್ ಹೌಸ್‌ಗಳ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್‌ಗಳಾದ ಪ್ರಭು ಸೊರೇನ್ ಮತ್ತು ಗುರುರಾಜ್ ಮೈಲಾರಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments