ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ಬೆಂಗಳೂರಿನ ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಅವರ ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶರು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 5ಬೇ ಆರೋಪಿಯಾಗಿರುವ ಬೈರತಿ ಬಸವರಾಜು ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಬೈರತಿ ಬಸವರಾಜು ಮುಂಬೈ ಮೂಲಕ ಬೆಂಗಳೂರಿಗೆ ಪೊಲೀಸರಿಗೆ ಶರಣಾಗಲು ಆಗಮಿಸುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದರು.



