Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!
ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಜಾಲಿ ರೈಡಿಗೆ 5 ಸ್ನೇಹಿತರು ಬಲಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 43 ವೀಕ್ಷಣೆಗಳು
bengaluru accident

ಜಾಲಿ ರೈಡಿಗೆ 7 ಮಂದಿ ಮೃತಪಟ್ಟ ದಾರುಣ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತಕ್ಕೆ 5 ಯುವಕರು ಮೃತಪಟ್ಟ ದಾರುಣ ಘಟನೆ ಮಹಾಶಿವರಾತ್ರಿಯಂದೇ ಸಂಭವಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ- ದಾಬಸ್‌ ಪೇಟೆ ಹೆದ್ದಾರಿಯಲ್ಲಿ 2 ದಿನಗಳ ಹಿಂದೆ ನಡೆದ ಜಾಲಿ ರೈಡಿಗೆ 6 ಯುವಕರು ಸೇರಿ 7 ಮಂದಿ ಅಸುನೀಗಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಜಾಲಿ ರೈಡಿಗೆ ಹೊರಟ ಯುವಕರ ಕಾರು ಅಪಘಾತಕ್ಕೆ ಒಳಗಾಗಿ 5 ಮಂದಿ ಅಸುನೀಗಿದ್ದಾರೆ.

ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಂದಾಲ್ ಬಳಿಯ ಫ್ಲೈಓವರ್ ಮೇಲೆ ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಅತಿವೇಗದಲ್ಲಿ ಚಲಿಸುತ್ತಿದ್ದ ಕಾಋು ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ಗೆ ಗುದ್ದಿದೆ.

ಅಪಘಾತದಲ್ಲಿ ದೊಡ್ಡಬಳ್ಳಾಪುರ ನಿವಾಸಿಗಳಾದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಹಾಗೂ ಧನುಷ್ (20) ಮೃತಪಟ್ಟಿದ್ದಾರೆ.

ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿದ್ದ ವೇಗಕ್ಕೆ ಹಾರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಬಸ್​ನ ಮುಂಭಾಗ ಸಹ ಜಖಂ ಆಗಿದೆ. ಬಸ್​ನಲ್ಲಿದ್ದ 43 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ನೇಹಿತರೆಲ್ಲರೂ ಜೊತೆಯಾಗಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8436 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment