Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ಕ್ರೀಡೆ

ಪಡಿಕ್ಕಲ್ ದ್ವಿಶತಕ, 689 ರನ್ ಪೇರಿಸಿದ ಕರ್ನಾಟಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
devdutt padikkal

ಲಕ್ನೋ: ನಾಯಕ ದೇವದತ್ ಪಡಿಕ್ಕಲ್  ದ್ವಿಶತಕ ಹಾಗೂ  ರವಿಚಂದ್ರನ್ ಸ್ಮರಣ್ ಶತಕದ ಸಹಾಯದಿಂದ ಕರ್ನಾಟಕ ತಂಡ ಸಂಪೂರ್ಣ 2 ದಿನ ಬ್ಯಾಟ್ ಬೀಸಿ ರಣಜಿ ಟ್ರೋಫಿ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಸಂಪೂರ್ಣ ಹಿಡಿತ ಸಾಧಿಸಿದೆ.

ಲಕ್ನೋದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಸೋಮವಾರ  2 ವಿಕೆಟ್ ಗೆ 355 ರನ್ ಗಳಿಂದ ಆಟ ಮುಂದುವರಿಸಿದ ಕರ್ನಾಟಕ ದಿನದಾಟದ ಅಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ಕಳೆದುಕೊಂಡು 689 ರನ್ ಪೇರಿಸಿದೆ.

ನಿನ್ನೆ ಕೆಎಲ್ ರಾಹುಲ್ ಶತಕ ಬಾರಿಸಿ ಔಟಾಗಿದ್ದರು. ಇಂದು 148 ರನ್ ಗಳಿಂದ ಆಟ ಮುಂದುವರಿಸಿದ ದೇವದತ್ ಪಡಿಕ್ಕಲ್, 330 ಎಸೆತಗಳಲ್ಲಿ 29 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 232 ರನ್ ಬಾರಿಸಿ ಔಟಾದರು.

ನಿನ್ನೆ 37 ರನ್ ಗಳಿಸಿದ್ದ ಕರುಣ್ ನಾಯರ್ (60) ನಿರ್ಗಮಿಸಿದರು. ರವಿಚಂದ್ರನ್ ಸ್ಮರಣ್ 191 ಎಸೆತಗಳಲ್ಲಿ 11 ಬೌಂಡರಿ ಒಳಗೊಂಡ 121 ರನ್ ಗಳಿಸಿ ಶತಕದ ಗೌರವಕ್ಕೆ ಪಾತ್ರರಾದರು. ಸ್ಮರಣ್ ಮತ್ತು 60 ರನ್ ಗಳಿಸಿದ ಕೃತಿಕ್ ಕೃಷ್ಣ 6ನೇ ವಿಕೆಟ್ ಗೆ 123 ರನ್ ಜೊತೆಯಾಟದಿಂದ ತಂಡದ ಮೊತ್ತವನ್ನು 700ರ ಗಡಿ ಸಮೀಪ ತಂದು ನಿಲ್ಲಿಸಿದರು.

ಉತ್ತರಾಖಂಡ್ ಬೌಲರ್ ನೀರಸವಾಗಿದ್ದು, ಇದರ ಪೂರ್ಣ ಲಾಭ ಪಡೆದ ಕರ್ನಾಟಕ ಬ್ಯಾಟ್ಸ್ ಮನ್ ಗಳು ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಫೈನಲ್ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಿಕೊಂಡಿತು.

ಕರ್ನಾಟಕ ಮೊದಲ ಇನಿಂಗ್ಸ್ 180 ಓವರ್ ಗಳಲ್ಲಿ 6 ವಿಕೆಟ್ ಗೆ 689 (ದೇವದತ್ ಪಡಿಕ್ಕಲ್ 232, ಸ್ಮರಣ್ 121, ಕರುಣ್ ನಾಯರ್ 60, ಕೃತಿಕ್ ಕೃಷ್ಣ 60, ಆದಿತ್ಯ 132/3).

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment