Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ನಾಳೆ ಕೋಲಾರದಲ್ಲಿ ಮಿನಿ ಹೆಲಿಕಾಪ್ಟರ್ ಘಟಕಕ್ಕೆ ಪ್ರಧಾನಿ ಚಾಲನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
pm modi
pm modi

ಬೆಂಗಳೂರು ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಸಂಜೆ 4.20ಕ್ಕೆ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂಆರ್ ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ವರ್ಷಕ್ಕೆ 10 ಹೆಲಿಕಾಪ್ಟರ್‌

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ ವರ್ಷಕ್ಕೆ ಹೆಚ್125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್​ಗಳನ್ನು ಇಲ್ಲಿ ತಯಾರಿಸಲಿದ್ದು, ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ.

ವೇಮಗಲ್ ಕೈಗಾರಿಕಾ ಪ್ರದೇಶವು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಸಮೀಪವಿರುವುದು ಈ ಸ್ಥಳ ಆಯ್ಕೆಗೂ ಪ್ರಮುಖ ಕಾರಣವಾಗಿದೆ. ಈ ಘಟಕ ಆರಂಭದಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಳವಾಗಲಿದ್ದು, ಕೋಲಾರ ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ಸಿಗಲಿದೆ. ರಾಷ್ಟ್ರಮಟ್ಟದಲ್ಲಿ ಕೋಲಾರ ಜಿಲ್ಲೆಯ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸುವ ಯೋಜನೆ ಇದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment