ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾನುವಾರ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.
ಉಗ್ರರ ದಾಳಿಗೆ ಪ್ರತಿದಾಳಿ ನಡೆಸುವ ಕುರಿತು ಅಮಿತ್ ಶಾ ಸೇನಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯ ವೇಳೆ ಉಗ್ರರ ದಾಳಿಯಿಂದ ಪ್ರಸ್ತುತ ಜಮ್ಮು ಕಾಶ್ಮೀರದಲ್ಲಿರುವ ಪರಿಸ್ಥಿತಿ ಹಾಗೂ ವಾತಾವರಣ ಅಲ್ಲದೇ ಮುಂದಿನ ದಿನಗಳಲ್ಲಿ ದಾಳಿ ಪ್ರಮಾಣ ಹೆಚ್ಚುವ ಸಾಧ್ಯತೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಎನ್ ಎಸ್ ಎ ಸಲಹೆಗಾರ ಅಜಿತ್ ಧೋವಲ್, ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಕರ್ನಲ್ ಮನೋಜ್ ಸಿನ್ಹಾ, ಸೇನಾಪಡೆ ಮುಖ್ಯಸ್ಥ ಮನೋಜ್ ಪಾಂಡೆ ಸೇರಿದಂತೆ ಸೇನಾ ವಿಭಾಗದ ವಿವಿಧ ಹಂತಗಳ ಮುಖ್ಯಸ್ಥರು ಭಾಗಿಯಾಗಿದ್ದರು.