Tuesday, May 19, 2026
Google search engine
Homeಅಪರಾಧತಾನು ಸತ್ತರೆ ಒಂಟಿ ಆಗ್ತಾಳೆ ಅಂತ ಪತ್ನಿಯನ್ನೇ ಕೊಂದ ನಿವೃತ್ತ ಇಸ್ರೊ ಉದ್ಯೋಗಿ

ತಾನು ಸತ್ತರೆ ಒಂಟಿ ಆಗ್ತಾಳೆ ಅಂತ ಪತ್ನಿಯನ್ನೇ ಕೊಂದ ನಿವೃತ್ತ ಇಸ್ರೊ ಉದ್ಯೋಗಿ

ಬೆಂಗಳೂರು: ತಾನು ಸತ್ತರೆ ಒಂಟಿಯಾಗುತ್ತಾಳೆ ಎಂದು ನಿವೃತ್ತ ಇಸ್ರೋ ಉದ್ಯೋಗಿ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಬೆಳಗ್ಗೆ ಟವಲ್‌ನಿಂದ ಕತ್ತು ಬಿಗಿದು ಪತ್ನಿ ಸಂಧ್ಯಾ (65) ಅವರನ್ನು ಪತಿ ನಾಗೇಶ್ವರ್‌ ರಾವ್‌ (75) ಕೊಲೆ ಮಾಡಿದ್ದಾರೆ.

ಮೂರು ವರ್ಷಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ವಾಸವಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು ಇರುವುದಿಲ್ಲ ಎಂದು ತೀರ್ಮಾನಿಸಿ ಪತ್ನಿಯನ್ನು ಹತ್ಯೆ ಮಾಡಲು ಪ್ಲ್ಯಾನ್‌ ಮಾಡಿದ್ದರು.

ಈ ಪ್ಲ್ಯಾನ್‌ನಂತೆ ಇಂದು ಬೆಳಗ್ಗೆ 11 ಗಂಟೆಗೆ ಟವಲ್‌ನಿಂದ ಕತ್ತು ಬಿಗಿದು ಪತ್ನಿಯನ್ನು ಹತ್ಯೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಧೈರ್ಯ ಸಾಲದೇ ಕಿರುಚಿಕೊಂಡು ಹೊರಗೆ ಬಂದಿದ್ದಾರೆ. ಅಕ್ಕಪಕ್ಕದ ನಿವಾಸಿಗಳು ಬಂದು ನೋಡಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಸಂಧ್ಯಾ ಮೃತದೇಹವನ್ನು ಈಸ್ಟ್ ಪಾಯಿಂಟ್ ಕಾಲೇಜಿಗೆ ಕಳುಹಿಸಲಾಗಿದೆ. ಪುತ್ರಿ ವಿದೇಶದಲ್ಲಿದ್ದು ಆಕೆಗೆ ಮಾಹಿತಿ ತಿಳಿಸಲಾಗಿದೆ. ಅವಲಹಳ್ಳಿ ಪೊಲೀಸ್ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ನಾಗೇಶ್ವರ್‌ ರಾವ್‌ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments