Friday, June 19, 2026
Google search engine
Homeದೇಶಮಾ.16 ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ ಘೋಷಣೆ

ಮಾ.16 ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ ಘೋಷಣೆ

ನವದೆಹಲಿ:ರಾಜ್ಯಸಭೆಯ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ಮಾರ್ಚ್ 16 ರಂದು ಚುನಾವಣಾ ಆಯೋಗ ನಡೆಸಲಿದೆ.

ರಾಜ್ಯಸಭೆಯ 37 ಸದಸ್ಯರ ಅವಧಿ ಬರುವ ಏಪ್ರಿಲ್‌ನಲ್ಲಿ ಮುಕ್ತಾಯವಾಗಲಿದ್ದು, ಈ ಸ್ಥಾನಗಳಿಗೆ ಬರುವ ಮಾ.16 ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ಪ್ರಕಟಿಸಿದೆ.

ಮಹಾರಾಷ್ಟ್ರ, ಒಡಿಸ್ಸಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಘಡ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಬಿಹಾರ ಸೇರಿದಂತೆ ಹತ್ತು ರಾಜ್ಯಗಳ 37 ಸ್ಥಾನಗಳಿಗೆ ಮಾ. 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯಸಭೆಯ 37 ಸ್ಥಾನಗಳ ಚುನಾವಣೆಗೆ ಈ ತಿಂಗಳ 26 ರಂದು ಹೊರ ಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಚುನಾವಣೆ ನಡೆಯುವ ಮಾ. 16 ರಂದೆ ಮತ ಎಣಿಕೆ ನಡೆದು, ಅಂದೇ ಫಲಿತಾಂಶವೂ ಪ್ರಕಟವಾಗಲಿದೆ.

ಈ ಚುನಾವಣೆಗಳು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಲು ಹಾಗೂ ಚುನಾವಣೆ ಮೇಲ್ವಿಚಾರಣೆಗಾಗಿ ವೀಕ್ಷಕರನ್ನು ನೇಮಿಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

ರಾಜ್ಯಸಭೆಯ ಚುನಾವಣೆಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ, ಛತ್ತೀಸ್‌ಘಡ, ಒಡಿಸ್ಸಾ, ಅಸ್ಸಾಂ, ಹರಿಯಾಣ ಬಿಹಾರದಲ್ಲಿ ಬಿಜೆಪಿ ಹೆಚ್ಚಿನ ಶಾಸಕರನ್ನು ಹೊಂದಿದ್ದು, ಇಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬರಲಿದ್ದಾರೆ.

ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ತಮಿಳುನಾಡಿನಲ್ಲಿ ಡಿಎಂಕೆ, ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರದಲ್ಲಿದ್ದು ಇಲ್ಲಿ ಬಿಜೆಪಿಯೇತರ ಅಭ್ಯರ್ಥಿಗಳು ಹೆಚ್ಚನ ಸಂಖ್ಯೆಯಲ್ಲಿ ರಾಜ್ಯಸಭೆಗೆ ಆಯ್ಕೆಯಾಗುವರು.

ರಾಜ್ಯಸಭೆಯಲ್ಲಿ ಈಗಾಗಲೇ ಬಿಜೆಪಿ ಹೆಚ್ಚಿನ ಸಂಖ್ಯೆಯನ್ನು ಹೊಂದಿದ್ದು, ಈ ಚುನಾವಣೆಗಳು ನಡೆದ ನಂತರ ಬಿಜೆಪಿಯ ಸಂಖ್ಯಾಬಲ ಮತ್ತಷ್ಟು ಹೆಚ್ಚಲಿದೆ.

ಚುನಾವಣಾ ವೇಳಾಪಟ್ಟಿ

ಚುನಾವಣಾ ಅಧಿಸೂಚನೆ, ನಾಮಪತ್ರ ಸಲ್ಲಿಕೆ 2026ರ ಫೆಬ್ರವರಿಯಿಂದ ಆರಂಭ
ಮಾರ್ಚ್ 5 ನಾಮಪತ್ರ ಸಲ್ಲಿಕೆಗೆ ಕೊನೆದಿನ
ಮಾರ್ಚ್ 6 ನಾಮಪತ್ರಗಳ ಪರಿಶೀಲನೆ
ಮಾರ್ಚ್ 9 ನಾಮಪತ್ರ ಹಿಂಪಡೆಯಲು ಕೊನೆದಿನ
ಮಾರ್ಚ್ 16 ಮತದಾನ
ಮತದಾನದ ಸಮಯ ಬೆಳಗ್ಗೆ 9 ರಿಂದ 4 ಗಂಟೆಯವರೆಗೆ.
ಮತ ಎಣಿಕೆ, ಫಲಿತಾಂಶ ಪ್ರಕಟ ಮಾರ್ಚ್ 16

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments