ಬುಲೆಟ್ ಮೇಲೆ ಯುವತಿಯರು ಜಾಲಿ ರೈಡ್ ಮಾಡಲು ಹೋದಾಗ ರಸ್ತೆ ಹಂಪ್ಸ್ ಕಾಣದೇ ಮುಗ್ಗರಿಸಿದ ಪರಿಣಾಮ ನವವಿವಾಹಿತೆ ಮೃತಪಟ್ಟು ಮತ್ತೊಬ್ಬ ಯುವತಿ ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ.
ಹಾಸನದ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತಪಟ್ಟಿದ್ದು, ಸ್ವಾತಿ (24) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯಿರ್ ಓದುತ್ತಿದ್ದು, ಸ್ವಾತಿಗೆ ಕಳೆದ ನವೆಂಬರ್ನಲ್ಲಿ ಮದುವೆಯಾಗಿತ್ತು ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಹಂಪ್ಸ್ ಗುರುತಿಸದೇ ವೇಗವಾಗಿ ಹೋಗಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಹಾರಿ ಬಿದ್ದಿದ್ದಾರೆ.
ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ನಲ್ಲಿ ಜಾಲಿ ರೈಡ್ ಮಾಡುತ್ತಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರು ರಸ್ತೆಗೆ ಹಾರಿ ಬಿದ್ದಿದ್ದಾರೆ.
ಗಾಯಗೊಂಡಿರುವ ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



