Friday, May 15, 2026
Google search engine
Homeಕ್ರೀಡೆಐಪಿಎಲ್‌ 2026 ಆರಂಭ ಮಾರ್ಚ್‌ 28ಕ್ಕೆ ಮುಂದೂಡಿಕೆ?

ಐಪಿಎಲ್‌ 2026 ಆರಂಭ ಮಾರ್ಚ್‌ 28ಕ್ಕೆ ಮುಂದೂಡಿಕೆ?

2026ನೇ ಸಾಲಿನ ಐಪಿಎಲ್‌ ಟಿ-20 ಟೂರ್ನಿಯ ಆರಂಭ 2 ದಿನ ಮುಂದೂಡಿಕೆ ಆಗಲಿದ್ದು, ಮಾರ್ಚ್‌ 28ರಿಂದ ಆರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಪ್ರಕಟವಾಗಲಿದೆ.

ಬೆಂಗಳೂರಿನಲ್ಲಿ ಐಪಿಎಲ್‌ ಟಿ-20 ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕಳೆದ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಪಂದ್ಯ ನಡೆಸಲು ಕರ್ನಾಟಕ ಸರ್ಕಾರ ಹಾಗೂ ಆರ್‌ ಸಿಬಿ ಹಿಂದೇಟು ಹಾಕಿತ್ತು.

ಈ ಹಿನ್ನೆಲೆಯಲ್ಲಿ ಟೂರ್ನಿಯ ವೇಳಾಪಟ್ಟಿ ಅಂತಿಮಗೊಂಡಿದ್ದರೂ ಅಧಿಕೃತವಾಗಿ ಪ್ರಕಟಿಸಿರಲಿಲ್ಲ. ಆದರೆ ಇದೀಗ ಕೆಲವೊಂದು ತಾಂತ್ರಿಕ ದೋಷಗಳು ಕಂಡು ಬಂದಿದ್ದು, ಫ್ರಾಂಚೈಸಿಗಳ ಜೊತೆ ಚರ್ಚಿಸಿ ಟೂರ್ನಿಯನ್ನು ಮುಂದೂಡುವ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಚಿಂತನೆ ನಡೆಸಿದೆ.

ಫ್ರಾಂಚೈಸಿಗಳ ಜೊತೆ ಚರ್ಚಿಸಿ ಐಪಿಎಲ್‌ ಟಿ-20 ಟೂರ್ನಿಯನ್ನು ಮಾರ್ಚ್‌ 26ರ ಬದಲು 28ರಿಂದ ಆರಂಭಿಸಿ ಮೇ 31ರವರೆಗೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಮುಂದಿನ ವಾರ ನಡೆಯಲಿರುವ ಐಪಿಎಲ್‌ ಆಡಳಿತ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಂಡ ನಂಥರ ವೇಳಾಪಟ್ಟಿ ಪ್ರಕಟಿಸಲಿದೆ.

ಐಪಿಎಲ್‌ ಆಡಳಿತ ಮಂಡಳಿಯಲ್ಲಿ ಮುಂಬರುವ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ವಿಧಾನಸಭೆ ನಡೆಯುವುದರಿಂದ ಪಂದ್ಯಗಳಿಗೆ ಭದ್ರತಾ ವ್ಯವಸ್ಥೆಯ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಸುಮಾರು ಎರಡು ತಿಂಗಳ ಕಾಲ ನಡೆಯಲಿರುವ ಟೂರ್ನಿಯ ವೇಳೆ ಯಾವುದೇ ಸಮಸ್ಯೆ ಉಂಟಾಗದಿರಲು ಟೂರ್ನಿಯ ವೇಳಾಪಟ್ಟಿಯಲ್ಲಿ ಅಲ್ಪ ಪರಿಷ್ಕರಣೆ ಮಾಡಿದ ನಂತರ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಲಿದೆ.

ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ?
ಚುನಾವಣೆಗಳ ಹೊರತಾಗಿ, ನಡೆಯುತ್ತಿರುವ ಟಿ 20 ವಿಶ್ವಕಪ್‌ನಿಂದಾಗಿ ಕ್ರೀಡಾಂಗಣದ ಲಭ್ಯತೆಯು ಮತ್ತೊಂದು ಪ್ರಮುಖ ಕಳವಳವಾಗಿದೆ. ಐಪಿಎಲ್‌ನ 10 ತಾಣಗಳಲ್ಲಿ ಐದು, ದೆಹಲಿ, ಕೋಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಅಹಮದಾಬಾದ್ ಪ್ರಸ್ತುತ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸುತ್ತಿವೆ ಮತ್ತು ಐಪಿಎಲ್ ಪ್ರಾರಂಭವಾಗುವ ಮೊದಲು ಹಸ್ತಾಂತರ ಮತ್ತು ಸಿದ್ಧತೆಗಳಿಗೆ ಸಮಯ ಬೇಕಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಲಿ ಚಾಂಪಿಯನ್ ಆಗಿ ಹೊಸ ಋತುವಿಗೆ ಪ್ರವೇಶಿಸಲಿದೆ, ಕಳೆದ ಋತುವಿನಲ್ಲಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ೬ ರನ್‌ಗಳ ಜಯ ಸಾಧಿಸುವ ಮೂಲಕ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ.

ಆರ್‌ಸಿಬಿ ಈ ಋತುವಿನ ಆರಂಭಿಕ ಪಂದ್ಯದಲ್ಲಿಯೂ ಭಾಗವಹಿಸಲಿದೆ, ಆದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸುರಕ್ಷತಾ ವರ್ಧನೆ ಕಾರ್ಯಗಳಿಂದಾಗಿ ಸ್ಥಳದ ಬಗ್ಗೆ ಅನಿಶ್ಚಿತತೆ ಉಳಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments