Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಗರ್ಭಕಂಠದ ಕ್ಯಾನ್ಸರ್ ತಡೆ ಉಚಿತ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 37 ವೀಕ್ಷಣೆಗಳು
pm modi hpv

9 ರಿಂದ 14 ವರ್ಷದೊಳಗಿನ ಬಾಲಕಿಯರು ಎದುರಿಸುವ ಗರ್ಭಕಂಠ ಕ್ಯಾನ್ಸರ್​ ರೋಗ ತಡೆಯುವ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ರಾಜಸ್ಥಾನದ ಅಜ್ಮೀರ್​​ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಾಲಕಿಯರಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರವ್ಯಾಪಿ ನಡೆಸಲಾಗುವ ಅಭಿಯಾನಕ್ಕೆ ಔಪಚಾರಿಕವಾಗಿ ಚಾಲನೆ ನೀಡಲಾಯಿತು.

9 ರಿಂದ 14 ವರ್ಷದೊಳಗಿನ ಬಾಲಕಿಯರಿಗೆ ‘ಗಾರ್ಡಸಿಲ್ 4’ ಲಸಿಕೆಯ ಒಂದು ಡೋಸ್ ಅಭಿಯಾನದಲ್ಲಿ ನೀಡಲಾಗುವುದು. ಇದರಿಂದ ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುವ ಟೈಪ್​ 16 ಮತ್ತು 18 ಹಾಗೂ ಟೈಪ್ 6 ಮತ್ತು 11 ನಿಯಂತ್ರಿಸಬಹುದಾಗಿದೆ.

ಲಸಿಕೆಯನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡಲಿದೆ. 14 ವರ್ಷದೊಳಗಿನ ಎಲ್ಲಾ ಬಾಲಕಿಯರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ, ತಾಲೂಕು ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ‘ಗಾರ್ಡಸಿಲ್ 4’ ಲಸಿಕೆಯ ಒಂದೇ ಡೋಸ್ ನೀಡಲು ಸೂಚಿಸಿ ಕೇಂದ್ರ ಆರೋಗ್ಯ ಸಚಿವಾಲಯವು ಫೆಬ್ರವರಿ 25 ರಂದು ಎಲ್ಲ ರಾಜ್ಯಗಳಿಗೆ ಪತ್ರ ಬರೆದು ಸೂಚಿಸಿದೆ.

ಸವಾಲಾಗಿರುವ ಗರ್ಭಕಂಠದ ಕ್ಯಾನ್ಸರ್

ದೇಶದಲ್ಲಿ ಹದಿಹರೆಯದ ಹುಡುಗಿಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಅತ್ಯಂತ ಮಾರಕ ಸಹಜ ಕ್ಯಾನ್ಸರ್ ಆಗಿದೆ. ವಾರ್ಷಿಕವಾಗಿ ಸುಮಾರು 80 ಸಾವಿರ ಪ್ರಕರಣಗಳು, 42 ಸಾವಿರಕ್ಕೂ ಹೆಚ್ಚು ಸಾವುಗಳು ಇದರಿಂದ ವರದಿಯಾಗುತ್ತಿವೆ. ಗರ್ಭಕಂಠದ ಕ್ಯಾನ್ಸರ್‌ನ ಬಹುತೇಕ ಪ್ರಕರಣಗಳಲ್ಲಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಎಂಬ ಸೋಂಕಿನಿಂದ ಉಂಟಾಗುತ್ತದೆ.

ಅಭಿಯಾನದಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ವರ್ಷ 14 ವರ್ಷ ವಯಸ್ಸಿನೊಳಗಿನ ಸುಮಾರು 1.15 ಕೋಟಿ ಹುಡುಗಿಯರಿಗೆ ಈ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು: ಈ ಲಸಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು ಮಾಡಿದೆ. ಲೈಂಗಿಕವಾಗಿ ಸಕ್ರಿಯರಾಗುವ ಮೊದಲು ಅಂದರೆ, 15 ವರ್ಷದೊಳಗಿನ ಬಾಲಕಿಯರಿಗೆ ಈ ಲಸಿಕೆ ನೀಡಿದಲ್ಲಿ ಅದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಸಾಬೀತಾಗಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 2 ಡೋಸ್‌ಗಳು ಮತ್ತು 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ಡೋಸ್‌ಗಳನ್ನು ನೀಡಬಹುದು ಎಂದು ಡಬ್ಲ್ಯೂಹೆಚ್​​ಒ ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment