Tuesday, May 19, 2026
Google search engine
Homeದೇಶಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಜೀವದಹನ

ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಜೀವದಹನ

ಪಟಾಕಿ ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 18 ಮಂದಿ ಸಜೀವದಹನಗೊಂಡ ಭೀಕರ ಘಟನೆ ಆಂಧ್ರ ಪ್ರದೇಶ ರಾಜ್ಯದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂವೆಂಬ ಗ್ರಾಮದಲ್ಲಿ ಸಂಭವಿಸಿದೆ.

ಮಹಿಳೆಯರು ಸ್ಫೋಟಕ ವಸ್ತುಗಳನ್ನು ತಯಾರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಮೃತರ ಪೈಕಿ ಬಹುತೇಕರು ಮಹಿಳೆಯರಾಗಿದ್ದಾರೆ ಎಂದು ಹೇಳಲಾಗಿದೆ.

ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೂ ಹಲವರು ಕಾರ್ಖಾನೆಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments