Sunday, May 31, 2026
Google search engine
Homeಅಪರಾಧಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿದ ದುಷ್ಕರ್ಮಿಗಳು

ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿದ ದುಷ್ಕರ್ಮಿಗಳು

ಬೆಂಗಳೂರು:ಯುವಕನೊಬ್ಬನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ.

ವಿಜಯಲಕ್ಷ್ಮೀ ಬಡಾವಣೆಯ ನಟರಾಜ್​​ ಅವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮೃತದೇಹ ಪತ್ತೆಯಾಗಿರುವ ಈ ಮನೆಯನ್ನು ಮಾಲಿಕ ನಟರಾಜ್​​ ಅವರ ಬಳಿ ಎರಡು ತಿಂಗಳ ಹಿಂದೆ ಮೋಹನ್ ಕೃಷ್ಣ ಮತ್ತು ಊರ್ವಶಿ ಎಂಬುವವರು ಬಾಡಿಗೆಗೆ ಪಡೆದಿದ್ದರು. ಊರ್ವಶಿ ನಾನು ಸಿನೆಮಾ ಸಹ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಮನೆ ಮಾಲಿಕರ ಬಳಿ ಪರಿಚಯಿಸಿಕೊಂಡಿದ್ದಳು ಎನ್ನಲಾಗಿದೆ.

ಬಾಡಿಗೆ ಸಂಬಂಧ ಇನ್ನೇನು ಅಗ್ರಿಮೆಂಟ್ ಮಾಡಿಸಬೇಕು ಅಂದುಕೊಳ್ಳುವಷ್ಟರಲ್ಲಿ ಮುಂದಿನ ತಿಂಗಳು ಮನೆ ಖಾಲಿ ಮಾಡುವೆ ಎಂದು ಇವರು ತಿಳಿಸಿದ್ದರಂತೆ. ಹೀಗಾಗಿ ಮತ್ತೇನಕ್ಕೆ ಅಗ್ರಿಮೆಂಟ್​​ ಮಾಡಿಸುವುದು ಎಂದು ಭಾವಿಸಿ ಮನೆ ಮಾಲಿಕ ನಟರಾಜ್​​ ಕೂಡ ಸುಮ್ಮನಾಗಿದ್ದರು.

ಆ ಬಳಿಕ ನಟರಾಜ್​​ ಮನೆ ಬಳಿ ಬಂದಾಗೆಲ್ಲ ಬಾಗಿಲಿಗೆ ಬೀಗ ಹಾಕಿರುವುದು ಕಂಡುಬರುತ್ತಿತ್ತು. ಈ ನಡುವೆ ಅಕ್ಕಪಕ್ಕದ ಮನೆಯವರು ನಟರಾಜ್ ಮಗನಿಗೆ ಫೋನ್ ಮಾಡಿ ನಿಮ್ಮ ಮನೆಯಿಂದ ಏನೋ ಕೆಟ್ಟ ವಾಸನೆ ಬರ್ತಿದೆ ಎಂದು ತಿಳಿಸಿದ್ದಾರೆ. ರವಿಕಿರಣ್ ಮನೆಗೆ ಬಂದು ನೋಡಿದಾಗ ಕೊಲೆಯಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗೂ ಮುನ್ನ ಮನೆಯಲ್ಲಿ ಪಾರ್ಟಿ ನಡೆದಿರುವ ಬಗ್ಗೆಯೂ ಸಂಶಯ ವ್ಯಕ್ತವಾಗಿದ್ದು, ಮೃತದೇಹವನ್ನು ಸಾಗಿಸಲಾಗಿದೆ.

ಕೊಲೆಯಾಗಿರುವ ಯುವಕ ಯಾರೆನ್ನುವ ಬಗ್ಗೆ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದು ನಾಲ್ಕೈದು ದಿನಗಳಾಗಿರುವ ಹಿನ್ನೆಲೆ ದೇಹ ಗುರುತು ಸಿಗದಷ್ಟು ಕೊಳೆತಿದ್ದು, ಈ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ಮನೆ ಬಾಡಿಗೆಗೆ ಪಡೆದಿದ್ದ ಊರ್ವಶಿ ಮತ್ತು ಮೋಹನ ಕೃಷ್ಣ ದಂಪತಿಯೇ ಎಂಬ ಅನುಮಾನ ಕೂಡ ಇದ್ದು, ಕೊಲೆಯಾದ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಬೀಗ ಹಾಕಿಕೊಂಡು ಹೋಗಿರುವ ಇವರ ಬಂಧನದ ನಂತರವೇ ಉತ್ತರ ಸಿಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments