Monday, June 29, 2026
Google search engine
Homeರಾಜ್ಯನಿಂತಿದ್ದ ಲಾರಿಗೆ ಕಾರು ಡಿಕ್ಕಿ: ದೇವಸ್ಥಾನದಿಂದ ಮರಳುತ್ತಿದ್ದ ನವದಂಪತಿ ಬಲಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ದೇವಸ್ಥಾನದಿಂದ ಮರಳುತ್ತಿದ್ದ ನವದಂಪತಿ ಬಲಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂಧ ನವದಂಪತಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಶನಿವಾರ ಸಂಭವಿಸಿದೆ.

ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಹಾವೇರಿ ನಿವಾಸಿಗಳಾದ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಸುನೀಗಿದ್ದಾರೆ.

ದೇವರ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. 15 ದಿನಗಳ ಹಿಂದೆಯಷ್ಟೇ ಮದುವೆ ಆಗಿದ್ದ ಇಬ್ಬರೂ ಸಂಪ್ರದಾಯದಂತೆ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾಋಎ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿ ಕಾರಿನಿಂದ ಮೃತದೇಹ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಖಲಾಗಿದ್ದ ‌ಮಾಡಲಾಗಿದೆ. ಇತ್ತ ಎರಡೂ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments