Friday, May 15, 2026
Google search engine
Homeರಾಜ್ಯಪೌರ ಕಾರ್ಮಿಕರ ನಂತರ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಸಚಿವ ಮಧು ಬಂಗಾರಪ್ಪ

ಪೌರ ಕಾರ್ಮಿಕರ ನಂತರ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಸಚಿವ ಮಧು ಬಂಗಾರಪ್ಪ

ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದೀಗ ತಮ್ಮ ವಿಧಾನಸಭಾ ಕ್ಷೇತ್ರದ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ್ದಾರೆ.

ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತಮ್ಮ ಜೊತೆ 10ನೇ ತರಗತಿಯಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ವಕ್ಷೇತ್ರ ಸೊರಬ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದಾರೆ.

32 ವಿದ್ಯಾರ್ಥಿಗಳು ಶಿವಮೊಗ್ಗದಿಂದ ಇಂಡಿಗೋ ವಿಮಾನದಲ್ಲಿ ತಮ್ಮ ಕ್ಷೇತ್ರದ ಶಾಸಕರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಪ್ರತಿಯೊಬ್ಬ ವಿದ್ಯಾರ್ಥಿ ಜೊತೆ ಅವರ ಓರ್ವ ಪೋಷಕರೂ ಸಹ ಪ್ರಯಾಣಿಸಿದರು.

ಸಚಿವ ಮಧು ಬಂಗಾರಪ್ಪ ಅವರು ವಿಮಾನದಲ್ಲಿ ಪ್ರತಿ ವಿದ್ಯಾರ್ಥಿಗೂ ಕಿಟಕಿ ಪಕ್ಕ ಸೀಟು ದೊರಕುವಂತೆ ಮಾಡಿ, ಪ್ರತಿಯೊಬ್ಬರನ್ನು ಮಾತನಾಡಿಸುತ್ತಾ, ಅವರ ಅಂಕಗಳನ್ನು ಕೇಳುತ್ತಾ ಗುಡ್ ಎನ್ನುತ್ತಾ ಹುರಿದುಂಬಿಸಿದರು.

30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ: ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಭಾನುವಾರ ಸೊರಬ ತಾಲೂಕಿನ 40 ಜನ ಪೌರ ಕಾರ್ಮಿಕರಿಗೂ ವಿಮಾನಯಾನ ಭಾಗ್ಯ ಕಲ್ಪಿಸಿದ್ದರು. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಿದ್ದರು.

ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಿದ್ದರು.

ಕಳೆದ ವರ್ಷ ತಮ್ಮ ಜನ್ಮ ದಿನಾಚರಣೆಯ ಅಂಗವಾಗಿ ಮಾಜಿ ಸಿಎಂ ದಿ.ಎಸ್.ಬಂಗಾರಪ್ಪ ಅವರ ಒಡನಾಡಿಗಳಿಗೆ ವಿಮಾನಯಾನ ಮಾಡಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments