Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: 8,176 ಪೊಲೀಸ್ ಹುದ್ದೆ ನೇರ ನೇಮಕಾತಿ ರಾಜ್ಯ ಸರ್ಕಾರ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
bengaluru police
bengaluru police

ಬೆಂಗಳೂರು:ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ.

ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ನೇಮಕಾತಿಯಲ್ಲಿ ವಿವಿಧ ಶ್ರೇಣಿಯ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಲಯಗಳಿಗೆ ಹಂಚಿಕೆ ಮಾಡಲಾಗಿದೆ.

ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್(ಸಿವಿಲ್)

ಒಟ್ಟು 4,110 ಹುದ್ದೆಗಳಿದ್ದು, ಇದರಲ್ಲಿ 3,500 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ವಲಯಕ್ಕೆ ಹಾಗೂ 610 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಾಗಿವೆ.

ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್ ಆರ್ ಪಿ)

ಒಟ್ಟು 2,032 ಹುದ್ದೆಗಳ ಭರ್ತಿಗೆ ಅವಕಾಶ ನೀಡಲಾಗಿದ್ದು, ಇದರಲ್ಲಿ 1,500 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಹಾಗೂ 532 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಲಭ್ಯವಿವೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಎಪಿಸಿ):

ಈ ವಿಭಾಗದಲ್ಲಿ 1,650 ಹುದ್ದೆಗಳಿದ್ದು, 1,375 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಮತ್ತು 275 ಹುದ್ದೆಗಳು ಕಲ್ಯಾಣ ಕರ್ನಾಟಕ ವಲಯಕ್ಕೆ ಹಂಚಿಕೆಯಾಗಿವೆ.

ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ ಐಎಸ್ ಎಫ್ )

ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಮೀಸಲಾದ 364 ಹುದ್ದೆಗಳನ್ನು ಈ ವಿಭಾಗದಲ್ಲಿ ಭರ್ತಿ ಮಾಡಲಾಗುತ್ತಿದೆ.
ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್ (ಡಿಎಸ್ ಐ)

ಒಟ್ಟು 20 ಹುದ್ದೆಗಳಿದ್ದು, ಇದರಲ್ಲಿ 15 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಹಾಗೂ 5 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿವೆ.

ಮೀಸಲಾತಿ ನಿಯಮ ಮತ್ತು ನ್ಯಾಯಾಲಯದ ಆದೇಶ

ಈ ನೇಮಕಾತಿಯು ಪರಿಷ್ಕೃತ ಮೀಸಲಾತಿ ನಿಯಮಗಳ ಅನ್ವಯ ನಡೆಯಲಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ಈ ಸಂಬಂಧ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಗಳ (ಸಂಖ್ಯೆ: 200448/2025, 17968/2025 ಮತ್ತು 3145/2025) ವಿಚಾರಣೆ ನಡೆಸಿ, ನ್ಯಾಯಾಲಯವು 27.11.2025 ರಂದು ನೀಡಿದ ಮಧ್ಯಂತರ ಆದೇಶವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಸರ್ಕಾರವು ನಿರ್ದೇಶನ ನೀಡಿದೆ.

ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಸರ್ಕಾರದಿಂದ ನೇಮಕಾತಿ ಅಧಿಸೂಚನೆ ಬಂದ ನಂತರ ಅರ್ಜಿಯನ್ನು ಸಲ್ಲಿಸಿ ಎಲ್ಲಾ ತಯಾರಿಯನ್ನು ನಡೆಸಿ ಪರೀಕ್ಷೆಯನ್ನ ಎದುರಿಸಿ ನಿಮ್ಮ ಕನಸಿನ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment