ಭಾರತದ ಆರಂಭಿಕರಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮ ಜೋಡಿ ಮೊದಲ ಟಿ-20 ವಿಶ್ವಕಪ್ ಫೈನಲ್ ನಲ್ಲಿ ವಿಶ್ವದಾಖಲೆ ಬರೆದಿದೆ.
ಅಹಮದಾಬಾದ್ ಮೈದಾನದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಲು ಇಳಿದ ಭಾರತ ತಂಡಕ್ಕೆ ಸಂಜು ಮತ್ತು ಅಭಿಷೇಕ್ 98 ರನ್ ಜೊತೆಯಾಟದಿಂದ ಭರ್ಜರಿ ಆರಂಭ ನೀಡಿದರು.
ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಮೊದಲ ವಿಕೆಟ್ ಗೆ 50 ರನ್ ಜೊತೆಯಾಟ ನಿಭಾಯಿಸುವ ಮೂಲಕ ಟಿ-20 ವಿಶ್ವಕಪ್ ಇತಿಹಾಸದಲ್ಲಿ ಅರ್ಧಶತಕದ ಜೊತೆಯಾಟ ನಿಭಾಯಿಸಿದ ವಿಶ್ವದಾಖಲೆ ಬರೆಯಿತು. 2009ರಲ್ಲಿ ಪಾಕಿಸ್ತಾನ ಮೊದಲ ವಿಕೆಟ್ ಗೆ 48 ರನ್ ಪೇರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.
ಅಭಿಷೇಕ್ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಅವರು 21 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 52 ರನ್ ಬಾರಿಸಿ ಔಟಾದರು. ಸಂಜು ಸ್ಯಾಮ್ಸನ್ ಸತತ ಮೂರನೇ ಅರ್ಧಶತಕ ಬಾರಿಸಿದ ಗೌರವಕ್ಕೆ ಪಾತ್ರರಾದರು. ಸಂಜು 33 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 50 ರನ್ ಪೂರೈಸಿದರು.



