Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

880 ಕೋಟಿ ವೆಚ್ಚದಲ್ಲಿ ಔಷಧ ಖರೀದಿ: ಸಚಿವ ದಿನೇಶ್ ಗುಂಡೂರಾವ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
dinesh gundu rao

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು, ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ವೆಚ್ಚದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಸೋಮವಾರ ಪ್ರಶೋತ್ತರ ವೇಳೆಯಲ್ಲಿ ಶಾಸಕರಾದ ಡಾ.ಧನಂಜಯ ಸರ್ಜಿ ಹಾಗೂ ಪ್ರತಾಪ ಸಿಂಹ ನಾಯಕ್ ಕೆ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಔಷಧಗಳನ್ನು ಖರೀದಿಸಲು ಕೆಎಸ್‌ಎಂಎಸ್‌ಸಿಎಲ್ ಸಂಸ್ಥೆಗೆ ಅನುಮೋದನೆ ನೀಡಲಾಗಿದೆ. ಔಷಧಿ ಖರೀದಿಯನ್ನು ಪಾರದರ್ಶಕವಾಗಿ ಟೆಂಡ‌ರ್ ಕರೆದು ಮಾಡಲಾಗುತ್ತಿದೆ. ಹೆಚ್ಚು ಬಿಡ್ದಾರರು ಭಾಗವಹಿಸಲು ಅವಕಾಶವಾಗುವಂತೆ ಟೆಂಡರ್ ಷರತ್ತುಗಳನ್ನು ವಿಧಿಸಲಾಗಿದೆ ಎಂದರು.

ಔಷಧ ಸರಬರಾಜು ಮಾಡುವ ಮುನ್ನವೇ ಗುಣಮಟ್ಟದ ಪರೀಕ್ಷೆ ಮಾಡಲಾಗುವುದು. ಕೊರತೆ ಇರುವ ಔಷಧಗಳನ್ನು ತಾತ್ಕಾಲಿಕವಾಗಿ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವಾರ್ಷಿಕ ಔಷಧಿ ಖರೀದಿ ಬದಲು 3 ರಿಂದ 4 ತಿಂಗಳಿಗೊಮ್ಮೆ ಅಗತ್ಯವಿರುವ ಔಷಧಿ ಖರೀದಿ ಮಾಡಲಾಗುತ್ತಿದೆ. ಇದರಿಂದ ಅವಧಿ ಮುಗಿಯುವ ಔಷಧಿಗಳ ಸಂಖ್ಯೆ ತಪ್ಪಲಿದೆ. 232 ಕೋಟಿ ರೂ.ಗಳಷ್ಟು ಔಷಧಿಗಳನ್ನು ಒದಗಿಸಲಾಗಿದೆ. ಈ ತಿಂಗಳು, ಮುಂದಿನ ತಿಂಗಳು ಸರಬರಾಜು ಆಗಲಿದೆ ಎಂದು ಮಾಹಿತಿ ನೀಡಿದರು.

2025-26ನೇ ಸಾಲಿನಲ್ಲಿ ಕೆಎಸ್ಎಂಎಸ್‌ಸಿಎಲ್ ಸಂಸ್ಥೆಯಿಂದ 134 ಔಷಧಿಗಳಲ್ಲಿ ಆದ್ಯತೆ ಮೇಲೆ 496 ಔಷಧಿಗಳ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಉಳಿದ 38 ಔಷಧಿಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

 ಎಬಿ ಎಆರ್ ಕೆ ಜೆಎಸ್ ಕೆ ಎಆರ್ ಎಸ್

ಅನುದಾನಗಳನ್ನು ಬಳಸಿಕೊಂಡು ಅಗತ್ಯ ಜೀವರಕ್ಷಕ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ನೀಡಲು ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 13 ಭ್ರೂಣ ಹತ್ಯೆ ಪ್ರಕರಣಗಳು ದಾಖಲಾಗಿವೆ ಎಂದು ಶಾಸಕರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಉಮಾಶ್ರೀ ಅವರ ಪರವಾಗಿ ಐವಾನ್ ಡಿಸೋಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭ್ರೂಣ ಹತ್ಯೆ ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಇದುವರೆಗೂ ಕಾಯಿದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ ಮಾಲೀಕರು, ವೈದ್ಯರ ವಿರುದ್ಧ 150 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಪೈಕಿ 80 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ. 70 ಪ್ರಕರಣಗಳು ನ್ಯಾಯಾಲಯಲ್ಲಿ ವಿವಿಧ ಹಂತಗಳಲ್ಲಿ ಬಾಕಿಯಲ್ಲಿ ಇರುತ್ತವೆ ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment