Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ರಾಜ್ಯ

ನಾಳೆಯಿಂದ ಕರೆ ನೀಡಿದ್ದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಮುಷ್ಕರ್ ವಾಪಸ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 15 ವೀಕ್ಷಣೆಗಳು
doctors

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಇಂದಿನಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ.

ಶೀಘ್ರ ಸಮಸ್ಯೆ ಪರಿಹರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಂಜೆ ಕರೆದ ಉನ್ನತ ಮಟ್ಟದ ಸಭೆಯಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂತೆಗೆದುಕೊಳ್ಳಲಾಗಿದೆ.

ಇಂದಿನಿಂದ ಮಾ. 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.

ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಸದಸ್ಯರೊಂದಿಗೆ ಕರ್ನಾಟಕ ಸರ್ಕಾರ ಮಾತುಕತೆ ನಡೆಸಿದ್ದು, ಅಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಅವರು ತಾಂತ್ರಿಕ ವ್ಯಕ್ತಿಯಾಗಿರುತ್ತಾರೆ.

ಇದು ಬಹುಕಾಲದ ಬೇಡಿಕೆಗಳಲ್ಲಿ ಒಂದಾಗಿತ್ತು. ನಮ್ಮ ಬೇಡಿಕೆಯನ್ನು ಕಾಲಮಿತಿಯಲ್ಲಿ ಪೂರೈಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರ ಮೇಟಿ ತಿಳಿಸಿದ್ದಾರೆ. ಕಾಲಮಿತಿಯೊಳಗೆ ಬೇಡಿಕೆ ಪೂರ್ಣಗೊಳಿಸುವುದಾಗಿ ಸರಕಾರ ಹೇಳಿದೆ. ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದೂಡುತ್ತಿದ್ದೇವೆ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ ನಂತರ ತೀರ್ಮಾನಿಸುತ್ತೇವೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.

ಸಂಘ ಈ ಹಿಂದೆ ಸರ್ಕಾರಕ್ಕೆ ಸಲ್ಲಿಸಿದ ಬೇಡಿಕೆ ಪ್ರಸ್ತಾವನೆಯಲ್ಲಿ 36,397 ಅಧಿಕಾರಿಗಳು ಮತ್ತು ನೌಕರರು ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ಸುಮಾರು ಆರು ಕೋಟಿ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದಾರೆ, ಆದರೆ ಖಾಲಿ ಹುದ್ದೆಗಳು, ನಿವೃತ್ತಿ ಮತ್ತು ನೇಮಕಾತಿಯ ಕೊರತೆಯು ಸಿಬ್ಬಂದಿಗಳ ಮೇಲೆ ಕೆಲಸದ ಹೊರೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇಲಾಖಾ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿ ರಚನಾತ್ಮಕ ಸಲಹೆಗಳನ್ನು ನೀಡಿದ್ದರೂ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿತ್ತು.

ಸರ್ಕಾರಿ ವೈದ್ಯರ ಮುಷ್ಕರ:

ಕೆಲವು ಸಂದರ್ಭಗಳಲ್ಲಿ ಇಲಾಖೆಯ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳ ನಡಾವಳಿಗಳನ್ನು ಸಹ ದಾಖಲಿಸಲಾಗಿಲ್ಲ. ಇದು ಸಿಬ್ಬಂದಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳ ನಿರಾಸಕ್ತಿಯನ್ನು ವಿವರಿಸುತ್ತದೆ. ಕೇಡರ್ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿಗಳು, ಪರಿಷ್ಕರಿಸಿದ ಜೇಷ್ಠತಾ ಪಟ್ಟಿಗಳ ಪ್ರಕಟಣೆ, ಅರ್ಹ ವೈದ್ಯರು ಮತ್ತು ಸಿಬ್ಬಂದಿಗೆ ಸಕಾಲಿಕ ಬಡ್ತಿ ಇವರ ಪ್ರಮುಖ ಬೇಡಿಕೆಗಳಾಗಿವೆ. ಅನಿಯಮಿತ ವರ್ಗಾವಣೆ, ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಮತ್ತು ಹುದ್ದೆಗಳ ನೇಮಕಾತಿಯಲ್ಲಿ ವಿಳಂಬ ಮತ್ತಿತರ ಸಮಸ್ಯೆಗಳ ಬಗ್ಗೆ ಸಂಘ ಕಳವಳ ವ್ಯಕ್ತಪಡಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment