Friday, May 15, 2026
Google search engine
Homeದೇಶಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿಪಕ್ಷಗಳಿಗೆ ಮುಖಭಂಗ

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿಪಕ್ಷಗಳಿಗೆ ಮುಖಭಂಗ

ನವದೆಹಲಿ: ಏಕಪಕ್ಷೀಯ ತೀರ್ಮಾನ ಹಾಗೂ ಪ್ರತಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು ಆರೋಪಿಸಿ ವಿಪಕ್ಷಗಳು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದಲ್ಲಿ ಸೋಲುಂಟಾಗಿದೆ. ಇದರಿಂದ ವಿಪಕ್ಷಗಳಿಗೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ.

ಬುಧವಾರ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಸುದೀರ್ಘ 10 ಗಂಟೆಗಳ ಚರ್ಚೆಯ ನಂತರ ಧ್ವನಿಮತದ ಮೂಲಕ ಮತದಾನವಾಗಿದ್ದು, ಆಡಳಿತಾರೂಢ ಪಕ್ಷಕ್ಕೆ ಜಯವಾಗಿದೆ.

ಓಂ ಬಿರ್ಲಾ ಗುರುವಾರದಿಂದ ಸ್ಫಿಕರ್ ಆಗಿ ಕಾರ್ಯ ಮುಂದುವರಿಸಲಿದ್ದಾರೆ. ಅವಿಶ್ವಾಸ ನಿರ್ಣಯದ ಮೇಲೆ ತೀರ್ಮಾನ ಆಗುವವರೆಗೂ ಆ ಸ್ಥಾನದಲ್ಲಿ ಕುಳಿತುಕೊಳ್ಳಲು ಅವರು ನಿರಾಕರಿಸಿದ್ದರು.

ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಿರಣ್ ರಿಜಿಜು, ವಿಪಕ್ಷ ನಾಯಕ ರಾಹುಲ್ ಗಾಂಧಿ, ಟಿಎಂಪಿ ಪಕ್ಷದ ಸದಸ್ಯರು ಸೇರಿದಂತೆ ಹಲವು ನಾಯಕರು ಮಾತನಾಡಿದರು.

ಬಿಜೆಪಿ ಎಂದು ಕೂಡ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿಲ್ಲ. ಸ್ಪೀಕರ್ ಓಂ ಬಿರ್ಲಾ ಅವರ ನಡೆಯಲ್ಲಿ ಅಸಮಾಧಾನವಿದ್ದರೂ ನಂಬಿಕೆ ಇರಬೇಕಿತ್ತು ಎಂದು ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ ಅಧಿವೇಶನವನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಬೇಡಿ. ಇಲ್ಲಿ ಚರ್ಚೆ ನಡೆಯಬೇಕಾದರೆ ವಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments