ಬೆಂಗಳೂರು:ಹೋಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್ ಗಳ ಕೊರತೆಯು ಒಂದು ವಾರ ಇಲ್ಲವೇ 10 ದಿನಗಳವರೆಗೆ ಉಂಟಾಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಮೇಲ್ಮನೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿಲಿಂಡರ್ ಗಳ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ಅವರು ಶೂನ್ಯ ವೇಳೆ ಮಾಡಿದ ಪ್ರಸ್ತಾಪಕ್ಕೆ ಸಚಿವರು ಉತ್ತರ ನೀಡಿದರು.
ಆಯಿಲ್ ಕಂಪನಿಗಳ ಜೊತೆ ಶುಕ್ರವಾರ ಬೆಳಿಗ್ಗೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆ, ಹಾಸ್ಟೆಲ್, ವಸತಿ ನಿಲಯಕ್ಕೆ ಕಮರ್ಷಿಯಲ್ ಸಿಲಿಂಡರ್ ಕೊಡುತ್ತೇವೆ, ತಕ್ಷಣಕ್ಕೆ ಸಮಸ್ಯೆ ಆಗಿದೆ. ಒಂದು ವಾರದಲ್ಲಿ ಸಮಸ್ಯೆ ಪರಿಹಾರ ಆಗಲಿದೆ. ಹೋಟೆಲ್ ಅವರಿಗೆ ಎಲೆಕ್ಟ್ರಿಕ್ ಸ್ಟೌವ್ ಬಳಕೆ ಮಾಡಿ ಎಂದು ಮನವಿ ಮಾಡಿದ್ದೇವೆ. ಹೋಟೆಲ್ ಅವರು ಒಂದು ವಾರ ಸಹಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಈಗಾಗಲೇ ಎರಡು ಹಡಗುಗಳು ದೇಶಕ್ಕೆ ಬಂದಿದೆ. ಮತ್ತೆ 10-12 ಹಡಗು ಬರುವ ಸಾಧ್ಯತೆ ಇದೆ. ಆಗ ಸಮಸ್ಯೆ ಸರಿ ಆಗುತ್ತದೆ. ಕಾಳಸಂತೆ ಮಾರಾಟದ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆಗೆ ಸೂಚನೆ ಕೊಡಲಾಗಿದೆ. ಡಿಜಿ ಅವರಿಗೆ ಸೂಚನೆ ಕೊಡಲಾಗಿದೆ. ಕಮರ್ಷಿಯಲ್ ಗ್ಯಾಸ್‌ಗೆ ಒಂದು ವಾರ ಅಥವಾ 10 ದಿನ ಸಮಸ್ಯೆ ಆಗುತ್ತದೆ. ಸ್ಟಾಕ್ ಇಲ್ಲ ಸಹಿಸಿಕೊಳ್ಳಬೇಕು. ಆಟೋಗಳಿಗೆ ಗ್ಯಾಸ್ ಅವಕಾಶ ಮಾಡಿಕೊಡಲು ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
ಆಟೋ, ಹೋಟೆಲ್‌ಗಳಿಗೆ ಸಿಲಿಂಡರ್ ದೊರೆಯುತ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೋಟೆಲ್‌ನಲ್ಲಿ ತಿಂಡಿ, ಊಟ ಸಮಸ್ಯೆ ಉಂಟಾಗಿದೆ. ಗ್ಯಾಸ್ ರೇಟ್ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸುದ್ದಿಯಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಸದಸ್ಯರು ಸದನದ ಗಮನ ಸೆಳೆದರು.
ವಿಶ್ವವಿದ್ಯಾಲಯಗಳಲ್ಲಿ ಗ್ಯಾಸ್‌ನಿಂದ ಊಟ ಕೊಡಲು ಆಗುತ್ತಿಲ್ಲ, ಹೀಗಾಗಿ- ಸಿಲಯ ಸಮಸ್ಯೆಗೆ ಪರಿಹಾರ ದೊರೆಯುವವರೆಗೆ ವಿವಿಗಳಿಗೆ ರಜೆ ಕೊಡಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಇಂದಿರಾ ಕ್ಯಾಂಟೀನ್, ಆಸ್ಪತ್ರೆಗಳಲ್ಲಿ ಸಮಸ್ಯೆ ಆಗಿದೆ. ಮದುವೆಗಳು ನಿಂತಿವೆ. ದೇವಸ್ಥಾನದಲ್ಲಿ ಪ್ರಸಾದಕ್ಕೂ ತೊಂದರೆಯಾಗಿದೆ,ರಾಜ್ಯ ಸರ್ಕಾರ ಸಿಲ ಸಮಸ್ಯೆ ನಿವಾರಣೆಗಸ ಮುಂದಾಗಬೇಕು ಎಂದು ಒತ್ತಾಯಿಸಿದರು.



