Monday, May 25, 2026
Google search engine
Homeಕ್ರೀಡೆಕ್ರೀಡಾ ಮೂಲಭೂತ ಸೌಲಭ್ಯಕ್ಕೆ ಕೇಂದ್ರ ಬಜೆಟ್ ನಲ್ಲಿ 4000 ಕೋಟಿ ಮೀಸಲು: ಹೆಚ್.ಡಿ. ಕುಮಾರಸ್ವಾಮಿ

ಕ್ರೀಡಾ ಮೂಲಭೂತ ಸೌಲಭ್ಯಕ್ಕೆ ಕೇಂದ್ರ ಬಜೆಟ್ ನಲ್ಲಿ 4000 ಕೋಟಿ ಮೀಸಲು: ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಕೇಂದ್ರ ಸರಕಾರದ ಖೇಲೋ ಇಂಡಿಯಾ ಯಜನೆಯ ಅಡಿಯಲ್ಲಿ ಮಂಡ್ಯಕ್ಕೆ ಮಂಜೂರಾಗಿರುವ ₹14 ಕೋಟಿ ವೆಚ್ಚದ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರದ ಯುವಜನ ಸಬಲೀಕರಣ, ಕ್ರೀಡಾ ಸಚಿವರಾದ ಮನ್ಸುಖ್ ಮಾಂಡವೀಯ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಭೂಮಿಪೂಜೆ ನೆರವೇರಿಸಿ ಅಡಿಗಲ್ಲು ಹಾಕಿದರು.

ಮಂಡ್ಯದ ವಿಸಿ ಫಾರಂನಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೆಸಿದ ಸಚಿವರಿಬ್ಬರು, ‘ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ’ ನಿನಾದಕ್ಕೆ ಪೂರಕವಾಗಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಯು ಉಜ್ವಲವಾಗಿ ಬೆಳೆದು ಹೆಚ್ಚು ಪ್ರಮಾಣದಲ್ಲಿ ಚಾಂಪಿಯನ್ ಗಳು ಹೊರಬರಲಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಿಬ್ಬರೂ ಭೂಮಿಪೂಜೆಯ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜುನಾಥ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

ಕ್ರೀಡೆಯಲ್ಲಿ ಸಾಧನೆ; ಮಂಡ್ಯವನ್ನು ಕೊಂಡಾಡಿದ ಮಾಂಡವೀಯ:

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮನ್ಸುಖ್ ಮಾಂಡವೀಯ ಅವರು; ಖೇಲೋ ಇಂಡಿಯಾ ಯೋಜನೆಯು ಭಾರತದ ತಳಮಟ್ಟದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಭಾರತವನ್ನು ಶ್ರೇಷ್ಠ ಕ್ರೀಡಾ ರಾಷ್ಟ್ರವಾಗಿ ರೂಪಿಸಲು ಕೇಂದ್ರ ಸರಕಾರ ಜಾರಿಗೆ ತಂದ ರಾಷ್ಟ್ರೀಯ ಕಾರ್ಯಕ್ರಮವಾಗಿದೆ ಎಂದರು.

ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು ಹಾಗೂ ಎನ್ಡಿಎ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಪರಿಶ್ರಮದಿಂದ ಮಂಡ್ಯದಲ್ಲಿ ಈ ಸುಸಜ್ಜಿತ ಕ್ರೀಡಾಂಗಣ ಬರುತ್ತಿದೆ ಎಂದ ಕ್ರೀಡಾ ಸಚಿವರು; ಕುಮಾರಸ್ವಾಮಿ ಅವರೇ, ಜನರಿಗಾಗಿ ನೀವು ಮಾಡಿರುವ ಕೆಲಸವು ಜನರು ನಿಮ್ಮ ಮೇಲೆ ತೋರಿಸುತ್ತಿರುವ ಪ್ರೀತಿಯಲ್ಲಿಯೇ ಕಾಣುತ್ತಿದೆ ಎಂದು ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಹೇಳಿದರು.

ವಿಶೇಷಚೇತನರ ಬಗ್ಗೆ ನೀವು ಹೊಂದಿರುವ ಮಮತೆ, ಬದ್ಧತೆಯನ್ನು ನಾನು ಕಣ್ಣಾರೆ ನೋಡುತ್ತಿದ್ದೇನೆ. ನನಗೆ ಬಹಳ ಸಂತೋಷ ಉಂಟು ಮಾಡಿದೆ. ನೀವು ಮಾಡುತ್ತಿರುವ ಈ ಕೆಲಸ ಶ್ಲಾಘನಾರ್ಹ, ನೀವು ಎಲೆಕ್ಟ್ರಿಕ್ ವಾಹನಗಳನ್ನು ನೀಡುವ ಮೂಲಕ ವಿಕಲಚೇತನರಿಗೆ ಮಾತ್ರ ಸಹಾಯ ಮಾಡುತ್ತಿಲ್ಲ, ಪರಿಸರಕ್ಕೆ ಕೂಡ ಒಳ್ಳೆಯದು ಮಾಡುತ್ತಿದ್ದೀರಿ ಎಂದು ಮಾಂಡವೀಯ ಅವರು ಶ್ಲಾಘಿಸಿದರು.

ಮಂಡ್ಯ ನೆಲದಿಂದ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕ್ರೀಡಾಪಟುಗಳು ಬಂದಿದ್ದಾರೆ. ಆ ಪೈಕಿ ನಾನು ವಿಕಾಸಗೌಡ, ಕೆ.ಆರ್. ಶಿಲ್ಪಾ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ. ಇಂತಹ ಅನೇಕ ಕ್ರೀಡಾಪಟುಗಳು ಮಂಡ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಮುಖ್ಯವಾಗಿ ವೀಲ್ ಚೇರ್ ಟೆನಿಸ್ ಆಟಗಾರ್ತಿ, ಭಾರತ ನಂಬರ್ ಒನ್ ವೀಲ್ ಚೇರ್ ಟೆನಿಸ್ ಆಟಗಾರ್ತಿ ಆಗಿರುವ ಶಿಲ್ಪಾ ಅವರು ಭಾರತದ ಕೀರ್ತಿಯನ್ನು ದೇಶ ವಿದೇಶಗಳಲ್ಲಿ ಬೆಳಗುತ್ತಿದ್ದಾರೆ. ಇಂತಹ ಅಸಂಖ್ಯಾತ ಪ್ರತಿಭೆಗಳು ಇಲ್ಲಿಂದ ಬರಬೇಕು ಎಂದು ಹಾರೈಸುತ್ತೇನೆ ಎಂದು ಅವರು ಹೇಳಿದರು.

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಳೆದ ಹನ್ನೊಂದು ವರ್ಷಗಳಲ್ಲಿ ಕ್ರೀಡಾ ಪೂರಕ ವ್ಯವಸ್ಥೆ ಹೆಚ್ಚಿಸಲು ಗುರುತರವಾಗಿ ಕೆಲಸ ಮಾಡಿದೆ. ಕಳೆದ ಬಜೆಟ್ ನಲ್ಲಿ ಕ್ರೀಡಾ ಮೂಲಸೌಕರ್ಯ ವೃದ್ಧಿಗೆ ₹4,000 ಕೋಟಿ ಹಂಚಿಕೆ ಮಾಡಿದೆ.

ಹತ್ತು ವರ್ಷಗಳ ಹಿಂದೆ ಈ ಉದ್ದೇಶಕ್ಕೆ ಕೇವಲ ₹1200 ಕೋಟಿ ಮಾತ್ರ ಕೊಡಲಾಗುತ್ತಿತ್ತು. ಅದರ ಪ್ರಮಾಣ ಈಗ ಮೂರೂವರೆ ಪಟ್ಟು ಹೆಚ್ಚಾಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕು ಎಂದು ಅವರು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ, ಶಾಸಕ ಮಂಜುನಾಥ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ತಿತರಿದ್ದರು.

ವಿಕಲಚೇತನರಿಗೆ ಎಲೆಕ್ಟ್ರಿಕ್ ವಾಹನಗಳ ವಿತರಣೆ

ವೇದಿಕೆಯ ಸಭೆಯ ನಂತರ 388 ಮಂದಿ ವಿಕಲಚೇತನರಿಗೆ ಟಿಸಿಎಸ್ ಕಂಪನಿ ಮತ್ತು ಭಾರತೀಯ ಉಕ್ಕು ಪ್ರಾಧಿಕಾರ (SAIL) ತಮ್ಮ ಸಿಎಸ್ ಆರ್ ನಿಧಿಯಲ್ಲಿ ನೀಡಿರುವ tvsqub9 ಎಲೆಕ್ಟ್ರಿಕ್ ವಾಹನವನ್ನು ವಿತರಣೆ ಮಾಡಲಾಯಿತು. ತದನಂತರ ಇನ್ಫೋಸಿಸ್ ಕಂಪನಿ ನೀಡಿರುವ 500 ಕಂಪ್ಯೂಟರ್ ಗಳು, 100 ಲ್ಯಾಪ್ ಟಾಪ್ ಗಳನ್ನು ಸರ್ಕಾರಿ ಶಾಲೆಗಳಿಗೆ ಹಸ್ತಾಂತರ ಮಾಡಲಾಯಿತು. ಹಿಂದುಜಾ ಕಂಪನಿ ಸಿಎಸ್ ಆರ್ ನಿಧಿಯಲ್ಲಿ ನೀಡಿರುವ ಅತ್ಯಾಧುನಿಕ ಆಂಬ್ಯುಲೆನ್ಸ್ ಅನ್ನು ಮಂಡ್ಯದ ಮಿಮ್ಸ್ ಸಂಸ್ಥೆಗೆ ನೀಡಲಾಯಿತು.

ಬಾವುಕರಾದ ಹೆಚ್ಡಿಕೆ:

ವಿಕಲಚೇತನರಿಗೆ ಎಲೆಕ್ಟ್ರಿಕ್ ವಾಹನಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರು ಭಾವೋದ್ವೇಗಕ್ಕೆ ಒಳಗಾದರು. ವಾಹನಗಳನ್ನು ಸ್ವೀಕರಿಸುತ್ತಿದ್ದ ವಿಕಲಚೇತನರು ತಮಗೇ ಕೃತಜ್ಞತೆ ಹೇಳುವಾಗ ಕಣ್ಣಲ್ಲಿ ನೀರು ತಂಬಿಕೊಂಡ ಸಚಿವರು, ಇಷ್ಟು ದೂರ ಬಂದು ವಾಹನಗಳನ್ನು ಸ್ವೀಕರಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

ಈ ವಿರಳ ಸಂದರ್ಭಕ್ಕೆ ಕೇಂದ್ರದ ಸಚಿವರಾದ ಮನ್ಸುಖ್ ಮಾಂಡವೀಯ ಅವರು, ಸ್ವಾಮೀಜಿ ಅವರು ಮತ್ತು ಇನ್ನಿತರ ಗಣ್ಯರು ಸಾಕ್ಷಿಯಾದರು.

ಬೃಹತ್ ಬೆಲ್ಲದ ಹಾಕಿ ಸಚಿವರೊಬ್ಬರನ್ನು ಸ್ವಾಗತಿಸಿದ ಅಭಿಮಾನಿಗಳು:

ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ ನೆರವೇರಿಸಿದ ನಂತರ ಕೇಂದ್ರದ ಇಬ್ಬರೂ ಸಚಿವರನ್ನು ವೇದಿಕೆಯ ಕಾರ್ಯಕ್ರಮಕ್ಕೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆ ತರಲಾಯಿತು. ಈ ಸಂದರ್ಭದಲ್ಲಿ ವಿಸಿ ಫಾರಂ ಗೇಟ್ ನಲ್ಲಿ ಬೃಹತ್ ಬೆಲ್ಲದ ಹರವನ್ನು ಹಾರ ಬರಮಾಡಿಕೊಳ್ಳಲಾಯಿತು. ಇಷ್ಟೊಂದು ದೊಡ್ಡ ಪ್ರಮಾಣದ ಬೆಲ್ಲದ ಹಾರದ ಮೂಲಕ ಸಿಕ್ಕಿದ ಸ್ವಾಗತವನ್ನು ಕಂಡು ಮಾಂಡವೀಯ ಅವರು ಚಕಿತರಾದರು. ಮಂಡ್ಯದ ಬೆಲ್ಲದ ಶ್ರೇಷ್ಠತೆಯ ಬಗ್ಗೆ ಕುಮಾರಸ್ವಾಮಿ ಅವರು ಮಾಂಡವೀಯ ಅವರಿಗೆ ವಿವರಣೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments