Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಕೇಂದ್ರ ಷರತ್ತಿನ ಒಪ್ಪಿಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
parliment
parliment

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಮತ್ತು ತುಮಕೂರು ಜಿಲ್ಲೆಗಳ 277 ಎಕರೆ (111 ಹೆಕ್ಟೇರ್) ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಷರತ್ತುಬದ್ಧ ಅನುಮತಿ ನೀಡಿದೆ.

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಇದೇ ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಮನವಿ ಮಾಡಿದ್ದರು.

ಎರಡು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಒಪ್ಪಿಗೆ ನೀಡಿದ್ದು, ದೇವೇಗೌಡರ ಪಯತ್ನದ ಫಲವಾಗಿ ಇದು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಎತ್ತಿನಹೊಳೆ ಯೋಜನೆಯ ವಿಳಂಬಕ್ಕೆ ಕಾರಣಗಳೇನು ಎಂಬ ಬಗ್ಗೆ ಇದೇ ಮಾರ್ಚ್ 9ರಂದು ದೇವೇಗೌಡರು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರದ ತಪ್ಪುಗಳಿಂದಾಗಿಯೇ ಈ ಯೋಜನೆ ವಿಳಂಬವಾಗಲು ಕಾರಣ ಎಂದು ಕಳವಳ ವ್ಯಕ್ತಪಡಿಸಿದ್ದರು.

ರಾಜ್ಯ ಸರ್ಕಾರವು ತನ್ನ ತಪ್ಪುಗಳನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಸತತ ಆರೋಪಗಳನ್ನು ಮಾಡುತ್ತಿದೆ. ಯೋಜನೆಯ ವಿಳಂಬದಿಂದ ನುಣಚಿಕೊಳ್ಳುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ಕ್ರಮ ವಹಿಸಬೇಕು ಎಂದು ಮಾಜಿ ಪ್ರಧಾನಿಗಳು ರಾಜ್ಯಸಭೆಯಲ್ಲಿ ಮನವಿ ಮಾಡಿದ್ದರು.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಹರಿಸುವುದಾಗಿ ಎತ್ತಿನಹೊಳೆ ಯೋಜನೆಯನ್ನು ರೂಪಿಸಲಾಯಿತು. ಆ ಜಿಲ್ಲೆಗಳಿಗೆ ನೀರು ಹರಿಸುವುದು ಹಾಗಿರಲಿ, ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಹಾಸನದಲ್ಲಿರುವ ಅರಸೀಕೆರೆಗೆ ಕೂಡ ನೀರು ಬಂದಿಲ್ಲ. ಅಲ್ಲದೆ, ಯೋಜನೆಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಅನೇಕ ಉಲ್ಲಂಘನೆಗಳನ್ನು ಮಾಡಿದ್ದು, ಇದನ್ನು ಕೇಂದ್ರ ಸರಕಾರ ಗಮನಿಸಿ ಸರಿಪಡಿಸಬೇಕು ಎಂದು ದೇವೇಗೌಡರು ಕೋರಿದ್ದರು.

ಆ ದಿನ ರಾಜ್ಯಸಭೆಯಲ್ಲಿ ಹಾಜರಿದ್ದ ಕೇಂದ್ರ ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರು ಮಾಜಿ ಪ್ರಧಾನಿಗಳ ಮನವಿ ಸ್ಪಂದಿಸಿದ್ದರು. ಅಲ್ಲದೆ, ಈಬಗ್ಗೆ ಸಚಿವರನ್ನು ಭೇಟಿಯಾಗಿ ಎತ್ತಿನಹೊಳೆ ಬಗ್ಗೆ ಚರ್ಚೆ ನಡೆಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment