Thursday, May 28, 2026
Google search engine
Homeಕ್ರೀಡೆಐಪಿಎಲ್ 2026: ಸನ್ ರೈಸರ್ಸ್ ಹೈದರಾಬಾದ್ ಗೆ ಇಶಾನ್ ನೆರವು, ಆರ್ ಸಿಬಿಗೆ 202 ರನ್...

ಐಪಿಎಲ್ 2026: ಸನ್ ರೈಸರ್ಸ್ ಹೈದರಾಬಾದ್ ಗೆ ಇಶಾನ್ ನೆರವು, ಆರ್ ಸಿಬಿಗೆ 202 ರನ್ ಗುರಿ

ಬೆಂಗಳೂರು: ನಾಯಕ ಇಶಾನ್ ಕಿಶನ್ ಸಿಡಿಲಬ್ಬರದ ಆಟದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿಗೆ 202 ರನ್ ಗಳ ಸವಾಲೊಡ್ಡಿದೆ.

ಕಳೆದ ವರ್ಷ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಾಕಷ್ಟು ಅಳೆದು ತೂಗಿ ಅನುಮತಿ ಪಡೆದ ನಂತರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ ಸತತವಾಗಿ ವಿಕೆಟ್ ಕಳೆದುಕೊಂಡರೂ ಆರಂಭಿಕ ಇಶಾನ್ ಕಿಶನ್ ಅವರ ಸ್ಫೋಟಕ ಆಟದಿಂದ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

ಜೇಕಬ್ ಡುವಿ ಮಾರಕ ದಾಳಿಗೆ ತತ್ತರಿಸಿದ ಎಸ್ ಆರ್ ಎಚ್ 29 ರನ್ ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಇಶಾನ್ ಕಿಶನ್ 38 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ 80 ರನ್ ಪೇರಿಸಿದರು.

ಇದೇ ಮೊದಲ ಬಾರಿ ಆರ್ ಸಿಬಿ ಪರ ಆಡಿದ ಜೇಕಬ್ ಡುವಿ 3 ವಿಕೆಟ್ ಪಡೆದು ಉತ್ತಮ ಆರಂಭ ನೀಡಿದರು. ರೊಮಾರಿಯೊ ಶೆಫಾರ್ಡ್ 3 ವಿಕೆಟ್ ಪಡೆದು ಉತ್ತಮ ಬೆಂಬಲ ನೀಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ (31) ಮತ್ತು ಅನಿಕೇತ್ ವರ್ಮಾ (43) ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.

ಇಶಾನ್ ಮತ್ತು ಕ್ಲಾಸೆನ್ 4ನೇ ವಿಕೆಟ್ ಗೆ 97 ರನ್ ಜೊತೆಯಾಟದಿಂದ ತಂಡವನ್ನು ಉತ್ತಮ ಸ್ಥಿತಿಗೆ ತಲುಪಿಸಿದರು. ಕೊನೆಯಲ್ಲಿ ಅನಿಕೇತ್ ವರ್ಮಾ 18 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 43 ರನ್ ಸಿಡಿಸಿ ಮಿಂಚಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments