ಗದಗ: ರೋಣ ಪಟ್ಟಣದ ಹೊರವಲಯದಲ್ಲಿ ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು,ಯಾವುದೇ ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಹುಬ್ಬಳ್ಳಿಯಿಂದ ರೋಣ ಮತ್ತು ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ಪಟ್ಟಣಕ್ಕೆ ತೆರಳುತ್ತಿದ್ದ ಈ ಲಾರಿ, ರಸ್ತೆಯ ತಿರುವಿನಲ್ಲಿ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಏನೂ ಹಾನಿಯಾಗಿಲ್ಲ.
ಓವರ್‌ಟೇಕ್ ಮಾಡುವ ಭರದಲ್ಲಿ ಲಾರಿಯು ರಸ್ತೆ ಪಕ್ಕದ ಗುಂಡಿಗೆ ಇಳಿದ ಪರಿಣಾಮ, ಚಾಲಕನ ಹತೋಟಿ ತಪ್ಪಿ ಪಕ್ಕದ ಜಮೀನಿಗೆ ಉರುಳಿ ಬಿದ್ದ ರಭಸಕ್ಕೆ ಅದರಲ್ಲಿದ್ದ ನೂರಾರು ಗ್ಯಾಸ್ ಸಿಲಿಂಡರ್‌ಗಳು ರಸ್ತೆ ಮತ್ತು ಜಮೀನಿನಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಸಿಲಿಂಡರ್‌ಗಳು ಸ್ಫೋಟಗೊಳ್ಳಬಹುದು ಎಂಬ ಭೀತಿಯಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಿಲಿಂಡರ್ ಸ್ಫೋಟಗೊಳ್ಳದ ಕಾರಣ ದೊಡ್ಡ ಮಟ್ಟದ ಅನಾಹುತ ತಪ್ಪಿದಂತಾಗಿದೆ. ಲಾರಿ ಚಾಲಕ ಮತ್ತು ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ರೋಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



