Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ವಿದೇಶ

ಅಮೆರಿಕದ 2 ಯುದ್ಧ ವಿಮಾನ, 1 ಬ್ಲಾಕ್‌ ಹಾಕ್‌ ಪತನ:‌ 20 ವರ್ಷಗಳಲ್ಲಿ ಅಮೆರಿಕದ ವಿಮಾನ ಬಿದ್ದಿದ್ದು ಇದೇ ಮೊದಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 97 ವೀಕ್ಷಣೆಗಳು
iran news

ದಾಳಿ ಮಾಡಲು ಬಂದ ಅಮೆರಿಕದ ಎರಡು ಅತ್ಯಾಧುನಿಕ ಯುದ್ಧ ವಿಮಾ ಹಾಗೂ ಬ್ಲಾಕ್‌ ಹಾಕ್‌ ಗನ್ನು ಇರಾನ್‌ ಹೊಡೆದುರುಳಿಸಿದೆ. 20 ವರ್ಷಗಳಲ್ಲಿ ಅಮೆರಿಕದ ಯುದ್ಧ ವಿಮಾನಗಳನ್ನು ಹೊಡೆದ ಮೊದಲ ದೇಶ ಇರಾನ್‌ ಆಗಿದೆ.

ಇಸ್ರೇಲ್ – ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ 36ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಇದೇ ಮೊದಲ ಬಾರಿಗೆ ಅಮೆರಿಕದ ಎರಡು ಯುದ್ಧ ವಿಮಾನಗಳನ್ನು ಇರಾನ್ ಹೊಡೆದುರುಳಿಸಿದೆ. ಘಟನೆಯಲ್ಲಿ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಇನ್ನೋರ್ವ ಅಮೆರಿಕನ್ ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇರಾನ್​​ನಲ್ಲಿ ಒಂದು ಫೈಟರ್ ಜೆಟ್ ಹೊಡೆದುರುಳಿಸಿ, ಅದರಲ್ಲಿದ್ದ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಇನ್ನು ಎರಡನೇ ವಿಮಾನದ ಸಿಬ್ಬಂದಿಯು ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಈ ಕುರಿತು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಶ್ವೇತಭವನ ಅಥವಾ ಪೆಂಟಗನ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸಂದರ್ಶನವೊಂದರಲ್ಲಿ ಟ್ರಂಪ್, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾತನಾಡಲು ನಿರಾಕರಿಸಿ, ಇದು ಯುದ್ಧ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇರಾನ್ ರಕ್ಷಣಾ ಪಡೆಗಳ ದಾಳಿಗೆ ಪರ್ಷಿಯನ್ ಕೊಲ್ಲಿಯಲ್ಲಿ ಯುಎಸ್ ಎ-10 ಪೈಟರ್ ಜೆಟ್ ಪತನಗೊಂಡಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮವು ಮಾಹಿತಿ ನೀಡಿದೆ. ಜೊತೆಗೆ ನಾಪತ್ತೆಯಾದ ಪೈಲಟ್ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಗೆ ಆಗಮಿಸಿದ್ದ ಎರಡು ಯುಎಸ್ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಸಹ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.

ಒಂದು ಸೀಟಿರುವ ಯುಎಸ್ ಎ -10 ವಿಮಾನವನ್ನು ಹೊಡೆದುರುಳಿಸಿದ್ದೇವೆ. ಇದಕ್ಕೂ ಮೊದಲು ಯುಎಸ್ ಎಫ್ -15 ಇ ಸ್ಟ್ರೈಕ್ ಈಗಲ್ ಅನ್ನು ಪತನಗೊಳಿಸಿದ್ದೇವೆ ಎಂದು ಇರಾನ್ ತಿಳಿಸಿತ್ತು. 289 ಕೋಟಿ ಮೌಲ್ಯದ ಈ ವಿಮಾನವು ಪೈಲಟ್ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಯ ಅಧಿಕಾರಿಯನ್ನು ಹೊತ್ತೊಯ್ಯುವ ವಾಯುಪಡೆಯ ಫೈಟರ್ ಜೆಟ್‌ನ ರೂಪಾಂತರವಾಗಿದೆ. ಎರಡರಲ್ಲಿ ಯಾರನ್ನು ರಕ್ಷಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

ಸುಮಾರು ರೂ 174 ಕೋಟಿ ಮೌಲ್ಯದ ಎ -10 ವಾರ್ಥಾಗ್ ಯುದ್ಧ ವಿಮಾನವು ಕುವೈತ್ ಮೇಲೆ ಡಿಕ್ಕಿ ಹೊಡೆದು ಪತನಗೊಂಡಿದ್ದು, ಪೈಲಟ್ ಹೊರಗೆ ಹಾರಿದ್ದರು. ಈ ಎರಡು ಫೈಟರ್ ಜೆಟ್‌ಗಳ ಜೊತೆಗೆ ಕಾಣೆಯಾದ ಪೈಲಟ್‌ಗಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದ ಎರಡು ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಸಹ ಇರಾನ್ ಹೊಡೆದಿದೆ. ಆದಾಗ್ಯೂ, ಹೆಲಿಕಾಪ್ಟರ್‌ಗಳು ಇರಾನಿನ ವಾಯುಪ್ರದೇಶದಿಂದ ಹೊರಬರುವಲ್ಲಿ ಯಶಸ್ವಿಯಾದವು ಎಂದು ಅಮೆರಿಕದ ಇಬ್ಬರು ಅಧಿಕಾರಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment