Saturday, June 27, 2026
Google search engine
Homeರಾಜ್ಯಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಬಳಿ 14 ಕೋಟಿ ಅಕ್ರಮ ಸಂಪತ್ತು!

ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಬಳಿ 14 ಕೋಟಿ ಅಕ್ರಮ ಸಂಪತ್ತು!

ಬೆಳಗಾವಿ: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದಾರೆ.

ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಬೆಳಗಾವಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 9ರಂದು ಬೆಳಗಾವಿಯ ಆಂಜನೇಯ ನಗರದ ಮನೆ, ಕಚೇರಿ, ಬ್ಯಾಂಕ್​​ ಲಾಕರ್ ಸೇರಿದಂತೆ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ಶೋಧ ನಡೆಸಿದ್ದರು. ದಾಳಿ ಅಂತ್ಯಗೊಂಡಿದ್ದು, ಈ ವೇಳೆ ಏನೆಲ್ಲಾ ಆಸ್ತಿ ಪತ್ತೆಯಾಗಿದೆ ಎಂಬುದರ ಕುರಿತು ಬೆಳಗಾವಿ ಲೋಕಾಯುಕ್ತ ಎಸ್​ಪಿ ಪ್ರಕಟಣೆ ಹೊರಡಿಸಿದ್ದಾರೆ.

ಆಸ್ತಿ ವಿವರ: ಅಧಿಕಾರಿಗಳ ಪರಿಶೀಲನೆ ಸಂದರ್ಭದಲ್ಲಿ 5 ಕೆಜಿ 960 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೇ 3.12 ಕೋಟಿ ರೂಪಾಯಿ ಬ್ಯಾಂಕ್ ಠೇವಣಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಬೆಳಗಾವಿಯಲ್ಲಿ 3 ಮನೆಗಳು. ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯಲ್ಲಿ 5 ನಿವೇಶನಗಳನ್ನು ಅಜಯಸಿಂಗ್ ಖರೀದಿಸಿರುವುದು ದಾಖಲೆಗಳಿಂದ ಕಂಡುಬಂದಿದೆ. ಮನೆಯಲ್ಲಿ ಜೊತೆಗೆ ಕಾರುಗಳು ಮತ್ತು ಬೈಕ್‌ ಸೇರಿ 14 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ನೀಡಿದ ಅಧಿಕೃತ ಮಾಹಿತಿ ಪ್ರಕಾರ, ಅಜಯಸಿಂಗ್ ಅವರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಸದ್ಯಕ್ಕೆ ಎಲ್ಲಾ ದಾಖಲೆಗಳು ಮತ್ತು ನಗದನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇತ್ತೀಚೆಗೆ, ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ 8 ಸರ್ಕಾರಿ ನೌಕರರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ಅಕ್ರಮ ಚರ ಹಾಗೂ ಸ್ಥಿರಾಸ್ತಿಗಳನ್ನು ಪತ್ತೆ ಮಾಡಿದ್ದರು.

ಮೈಸೂರು, ಬೆಳಗಾವಿ, ಮಂಗಳೂರು, ಚಿತ್ರದುರ್ಗ, ಬಳ್ಳಾರಿ, ಬೀದರ್ ಮತ್ತು ಕೊಡಗಿನಲ್ಲಿ ಅಧಿಕಾರಿಗಳು ಆದಾಯ ಮೀರಿ ಆಸ್ತಿ ಸಂಪಾದಿಸಿರುವ ಆರೋಪದಡಿ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳೂ ಸೇರಿದಂತೆ 35 ಕಡೆಗಳಲ್ಲಿ ದಾಳಿ ನಡೆದಿತ್ತು. ಈ ವೇಳೆ 36.92 ಕೋಟಿ ರೂ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದರು. ದಾಳಿ ಸಂಬಂಧ ಆಯಾ ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದರು.

ಮೈಸೂರು ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಜಿ.ಕೆ.ರೇವಣ್ ಕುಮಾರ್​ಗೆ ಸಂಬಂಧಿಸಿದ 3 ಸ್ಥಳಗಳಲ್ಲಿ ಶೋಧ ನಡೆದಿದ್ದು, 4.27 ಕೋಟಿ ರೂ. ಆಸ್ತಿ ಪತ್ತೆಯಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments