Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕಾನೂನು

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ತನಿಖೆ ಆದೇಶಕ್ಕೆ ಸುಪ್ರೀಂ ತಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
rohini sindhuri ias

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಭ್ರಷ್ಟಾಚಾರ ಆರೋಪದ ತನಿಖೆಗೆ ನಡೆಸಲು ಪೂರ್ವಾನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ಪರಿಸರ ಸ್ನೇಹಿ ಬಟ್ಟೆಯ ಕೈಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಿದ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ರೋಹಿಣಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ ದತ್ತ ಹಾಗೂ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ ಹಾಗೂ ಎನ್.ಆರ್. ರವಿಚಂದ್ರೇಗೌಡ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಬೇಕು ಮತ್ತು ಪ್ಲಾಸ್ಟಿಕ್‌ ಬಳಕೆಗೆ ಇತಿಶ್ರೀ ಹಾಡಿ ಬಟ್ಟೆಯ ಕೈಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಜಿಲ್ಲೆಯ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು.

“ಈ ನಿಟ್ಟಿನಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ ₹13 ಇದ್ದರೆ ಅವುಗಳನ್ನು ಪ್ರತಿ ಚೀಲಕ್ಕೆ ₹52ರಷ್ಟು ದರ ನೀಡಿ ಖರೀದಿಸಲಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ₹7.65 ಕೋಟಿ ನಷ್ಟು ಉಂಟು ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಕೈಚೀಲಗಳ ಖರೀದಿಗೆ ಬಳಸಲಾಗಿದೆ. ಗ್ರಾಮ ಸ್ವರಾಜ್ಯದ ಎಲ್ಲ ಕನಸುಗಳನ್ನು ಗಾಳಿಗೆ ತೂರಿ ಭ್ರಷ್ಟಾಚಾರ ಎಸಗಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.

ಅಕ್ರಮದ ಕುರಿತಂತೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಅಡಿಯಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಕೋರಿ ಎನ್.ಆರ್.ರವಿಚಂದ್ರೇಗೌಡ ಅವರು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) 2021ರ ಅಕ್ಟೋಬರ್ 13ರಂದು ದೂರು ನೀಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment