Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ: ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 24 ವೀಕ್ಷಣೆಗಳು
vinay kulakrni

ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಎಂದು ನ್ಯಾಯಾಲಯ ಆದೇಶಿಸಿದ್ದು, ಇಬ್ಬರನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ದೋಷ ಮುಕ್ತಗೊಳಿಸಿದೆ.

ದೋಷಿಗಳಿಗೆ ನ್ಯಾಯಾಲಯ ನಾಳೆ ತೀರ್ಪು ಪ್ರಕಟಿಸಲಿದ್ದು, ಅಪರಾಧಿಗಳನ್ನು ಕಸ್ಟಡಿಗೆ ಪಡೆಯಲು ನ್ಯಾಯಾಲಯ ಸೂಚಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿದ್ದಾರೆ.

ಪ್ರಕರಣದಲ್ಲಿ ಎಲ್ಲ ಆರೋಪಿಗಳು ಕ್ರಿಮಿನಲ್​ ಪಿತೂರಿ ನಡೆಸಿ ಕೊಲೆ ಮಾಡಿರುವ ಅಂಶವು ಸಾಕ್ಷ್ಯಾಧಾರಗಳಿಂದ ಗೊತ್ತಾಗಿದ್ದು, ಶಿಕ್ಷೆ ವಿಧಿಸುತ್ತಿರುವುದಾಗಿ ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಆದೇಶದಿಂದ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಿದ್ದು,ಗುರುವಾರ ಶಿಕ್ಷೆ ಪ್ರಮಾಣದ ಬಗ್ಗೆ ವಾದಮಂಡನೆ ನಡೆಸಿ ಶಿಕ್ಷೆ ಪ್ರಮಾಣವನ್ನೂ ಸಹ ಪ್ರಕಟಿಸಲಿದೆ.

21ರಲ್ಲಿ 17 ಮಂದಿ ಅಪರಾಧಿಗಳು

ಬಿಜೆಪಿ ಮುಖಂಡ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ 21 ಆರೋಪಿಗಳ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ.

ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ ಎ 20 ವಾಸುದೇವ ನಿಲೇಕಣಿ, ಎ21 ಸೋಮಶೇಖರ ಅವರನ್ನು ಬಿಡುಗಡೆಗೆ ಕೋರ್ಟ್ ಆದೇಶಿಸಿದೆ.

ದೋಷಿಗಳು:
ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್.

ಪ್ರಕರಣದ ಹಿನ್ನೆಲೆ:

ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂನ್ 15ರಂದು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಆದರೆ ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಅಲ್ಲದೇ ಈ ಕೊಲೆಯಲ್ಲಿ ವಿನಯ್‌ ಕುಲಕರ್ಣಿ ಕೈವಾಡವಿರುವ ಶಂಕೆ ವ್ಯಕ್ತವಾಗಿತ್ತು.

ಕುಲಕರ್ಣಿ ಬಂಧನ:

ಈ ಹಿನ್ನೆಲೆಯಲ್ಲಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

2016 ಜೂನ್‌ನಲ್ಲಿ ಯೋಗಿಶ್ ಗೌಡ ಕೊಲೆಯಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಕೊಲೆಗೆ ಒಳಸಂಚು ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ ಪೊಲೀಸರ ಮುಂದೆ ಆರು ಮಂದಿ ಆರೋಪಿಗಳು ಶರಣಾಗಿದ್ದರು.

ಯೋಗಿಶ್ ಗೌಡ ಕುಟುಂಬಸ್ಥರ ಮನವಿ ಮೇರೆಗೆ ತನಿಖೆಯನ್ನು ಸಿಬಿಐಗೆ ನೀಡಲಾಗಿತ್ತು. 2019ರಲ್ಲಿ ಸಿಬಿಐ ಗೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ತನಿಖೆ ನಡಸಿದ್ದ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment