ಮೀಸಲಾತಿ ಪ್ರಮಾಣವನ್ನು ಶೇ.65ಕ್ಕೆ ಹೆಚ್ಚಳ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.
ಜಾತಿ ಸಮೀಕ್ಷೆ ನಂತರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗಗಳಿಗೆ ನೀಡಲಾಗಿದ್ದ ಶೇ.50ರಷ್ಟು ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸಿ ಬಿಹಾರ ಸರ್ಕಾರ ಕಳೆದ ವರ್ಷ ನವೆಂಬರ್ನಲ್ಲಿ ನಿರ್ಧಾರ ಕೈಗೊಂಡಿತ್ತು.
ಮೀಸಲಾತಿ ಹೆಚ್ಚಳ ಪ್ರಶ್ನಿಸಿ ಸಲ್ಲಿಸಿದ್ದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ಬಿಹಾರ ಸರ್ಕಾರ ಸಂವಿಧಾನದ ಸಮಾನತೆ ಕುರಿತ ಸೆಕ್ಷನ್ 14, 15 ಮತ್ತು 16 ನಿಯಮವನ್ನು ಉಲ್ಲಂಘಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.