Thursday, May 28, 2026
Google search engine
Homeರಾಜಕೀಯಹೊಸ ಪಕ್ಷದ ಪ್ರಕಿಯೆಗೆ ಮುಂದಿನ ತಿಂಗಳು ಚಾಲನೆ: ಬಸನಗೌಡ ಪಾಟೀಲ್ ಯತ್ನಾಳ್

ಹೊಸ ಪಕ್ಷದ ಪ್ರಕಿಯೆಗೆ ಮುಂದಿನ ತಿಂಗಳು ಚಾಲನೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭಿಸುವ ಕುರಿತ ಪ್ರಕ್ರಿಯೆಗೆ ಚಾಲನೆ ನೀಡುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದ ಮೂಲಕ ರಾಜ್ಯಾದ್ಯಂತ ಹೊಸ ಪಕ್ಷ ರಚಿಸುವ ಕುರಿತು ಸಭೆ ಪ್ರಾರಂಭಿಸುತ್ತೇನೆ ಎಂದರು.

ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಯತ್ನಾಳ ಈ ಹಿಂದೆ ಹೇಳಿಕೆ ನೀಡಿದ್ದರು. ಇದೀಗ ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯದಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರ ಪ್ರವಾಸ ಮಾಡುತ್ತೇನೆ. ಹಿಂದೂಪರ ಚಿಂತನೆ ಉಳ್ಳವರು ನಿರುದ್ಯೋಗಿ ಯುವಕರನ್ನ, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ಪಕ್ಷಕ್ಕೆ ಯಾವ ಚಿಹ್ನೆ ಕೊಡುತ್ತಾರೆ ನೋಡಬೇಕು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments