Monday, May 25, 2026
Google search engine
Homeಅಪರಾಧನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್: ವರ್ಷದ ನಂತರ ಜಾಮೀನು ಮಂಜೂರು

ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್: ವರ್ಷದ ನಂತರ ಜಾಮೀನು ಮಂಜೂರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಒಂದು ವರ್ಷದಿಂದ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ.

ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್​​​ ಗೆ ಬುಧವಾರ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಒಂದು ವರ್ಷದ ನಂತರ ಜೈಲಿನಿಂದ ಹೊರಗೆ ಬರಲಿದ್ದಾರೆ.

2025 ಮಾರ್ಚ್ 3ರಂದು ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಕೈಯಲ್ಲಿ ಲಾಕ್ ಆಗಿದ್ದರು. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ರನ್ಯಾ ರಾವ್​ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ.

ತನಿಖೆ ವೇಳೆ ಆಭರಣ ವ್ಯಾಪಾರಿ ಸಾಹಿಲ್ ಜೈನ್ ಸಹ ಈ ಜಾಲದಲ್ಲಿದ್ದು, ಸುಮಾರು 40 ಕೋಟಿ ರೂ. ಮೌಲ್ಯದ ಸುಮಾರು 49 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮೂಲಕ ಮಾರಾಟ ಮಾಡಲು ರನ್ಯಾಗೆ ನೆರವಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ದೊಡ್ಡ ಮಟ್ಟದ ಹವಾಲಾ ವಹಿವಾಟು ನಡೆಸಿದ್ದು, ಕಮಿಷನ್ ಕೂಡಾ ಪಡೆದಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments