ಬಹುನೀರೀಕ್ಷಿತ ಎಸ್ಸೆಸ್ಸೆಲ್ಸಿ 2026ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಸಾರ್ವಕಾಲಿಕ ದಾಖಲೆ ಸಂಖ್ಯೆಯ ಶೇ.94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7 ವಿದ್ಯಾರ್ಥಿಗಳು 625ಕೆಕ 625 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದರು. ಈ ಬಾರಿಯೂ ಬಾಲಕಿಯರು 93.97ರಷ್ಟು ಉತ್ತೀರ್ಣರಾಗುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಕರು ಶೇ.೮೮ರಷ್ಟು ಉತೀರ್ಣರಾಗಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಬಾಲಕರ ಫಲಿತಾಂಶದಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ದಾವಣಗೆರೆಯ ಭರತ್, ಬೆಂಗಳೂರು ಉತ್ತರದ ಧನುಷ್, ರಾಯಚೂರಿನ ಸುಖದೇವ್, ಚಿಕ್ಕಮಗಳೂರಿನ ಬೃಂದಾ, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ ಸೇರಿದಂತೆ 7 ವಿದ್ಯಾರ್ಥಿಗಳು ರ್ಯಾಂಕ್ ವಿಜೇತರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಶೇ.98.40 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಉಡುಪಿ 98.18 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಪಡೆದರೆ, ಉತ್ತರ ಕನ್ನಡ 3, ಹಾಸನ 4, ಮಂಡ್ಯ 4 ಶಿರಸಿ 6 ಹಾಗೂ ಕಲಬುರಿ ಕೊನೆಯ ಸ್ಥಾನ ಪಡೆದಿದೆ. ಶೇ.93.97 ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಉತ್ತೀರ್ಣರಾಗಿ ದಾಖಲೆ ಬರೆದಿದ್ದಾರೆ.



