Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಶೇ.1.50ರಷ್ಟು ಹೆಚ್ಚಳ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 22 ವೀಕ್ಷಣೆಗಳು
money
money

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ಸರ್ಕಾರ ಆದೇಶುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಕಳೆದ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜ.1, 2026ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 14.25 ರಿಂದ ಶೇ.15.75 ಗೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ.

ಏಪ್ರಿಲ್​​ ನಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ.2 ರಷ್ಟು ದಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ. 1.50 ರಷ್ಟು ಡಿಎ ಹೆಚ್ಚಳ ಮಾಡಿ ಆದೇಶಿಸಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ನೌಕರನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ ಸೇರಿಸಲಾಗುವುದು.

ಅದೇ ರೀತಿ 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮದಡಿ ನೌಕರನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ ಹಾಗೂ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸಿಬ್ಬಂದಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳನ್ನು ಸೇರಿಸಿ ಅದರ ಮೇಲೆ ತುಟ್ಟಿಭತ್ಯೆ ನೀಡಲಾಗುತ್ತದೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ 1ನೇ ಜನವರಿ 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 14.25 ರಿಂದ ಶೇಕಡ 15.75 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸಲಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುತ್ತದೆ.

ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು, ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಗೆ ಪೂರ್ಣಗೊಳಿಸತಕ್ಕದ್ದು. ಮತ್ತು 50 ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment