ರನ್ ಮೆಷಿನ್ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 14 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಬುಧವಾರ ನಡೆದ ಕೆಕೆಆರ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 79 ರನ್ ಗಳಿಸಿದ್ದಾಗ ಈ ಸಾಧನೆ ಮಾಡಿದರು. ಈ ಸಾಧನೆಗಾಗಿ ಕೊಹ್ಲಿ 409 ಪಂದ್ಯಗಳನ್ನು ತೆಗೆದುಕೊಂಡರು. ಭಾರತದ ಪರ ರೋಹಿತ್ ಶರ್ಮ 13491 ರನ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.



