Monday, May 18, 2026
Google search engine
Homeರಾಜಕೀಯನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮೇ 21ರಂದು ಯುವ ಕಾಂಗ್ರೆಸ್ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮೇ 21ರಂದು ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೆಪಿಸಿಸಿ ಕಛೇರಿ: ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರಮೋದಿರವರ ದುರಾಡಳಿತದಿಂದ ವಿದೇಶಾಂಗ ನೀತಿಗಳಲ್ಲಿ ವೈಫಲ್ಯ ಮತ್ತು ರಾಷ್ಟ್ಕೀಯ ಹಿತಾಸಕ್ತಿಗಳ ರಕ್ಷಣೆಯಲ್ಲಿ ನಿರ್ಲಕ್ಷ್ಯ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ನಿರಂತರ ಅಕ್ರಮ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇ 21ರಂದು ಫೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮತ್ತು ರಾಜಭವನ ಚಲೋ ಕಾರ್ಯ ಹಮ್ಮಿಕೊಂಡಿದೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥಗೌಡ ಹೆಚ್.ಎಸ್., ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ 22ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿನೆರಳು ಬಿದ್ದಿದೆ. 10ಲಕ್ಷ ರೂಪಾಯಿ ಮಾರಾಟವಾಗುತ್ತಿರುವ ಪ್ರಶ್ನೆ ಪತ್ರಿಕೆ ಬಿಜೆಪಿ ಕಾರ್ಯಕರ್ತರು ಬೀದಿ, ಬೀದಿಗಳಲ್ಲಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡುತ್ತಿದ್ದಾರೆ.. ರಾಜ್ಯದ 1.ಲಕ್ಷ 80ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ದೇಶದ ಇಂತಹ ಕಠಿಣ ಪರಿಸ್ಥಿತಿ ಎದುರಿಸಲು ವಿದ್ಯಾವಂತ ಪ್ರಧಾನಿಯ ಅವಶ್ಯಕತೆ ಇದೆ. ಪ್ರಧಾನಿ ಅವಿದ್ಯಾವಂತರಾಗಿ ಇರುವುದು ದೇಶದ ದುರಂತ. ವಿಶ್ವಗುರು ತಮಿಳುನಾಡು, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲಿಲ್ಲ ಎಂದರು.

ಪೆಟ್ರೋಲ್, ಡೀಸೆಲ್ ಉಳಿತಾಯ ಮಾಡಲು ಬಿಜೆಪಿ ನಾಯಕರು ಮೆಟ್ರೋ ಪ್ರಯಾಣದಲ್ಲಿ ಪ್ರಯಾಣಿಸಿ ಬೂಟಾಟಿಕೆ ಪ್ರದರ್ಶನ ಮಾಡುತ್ತಿದ್ದಾರೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದೆ 12ವರ್ಷ ಕೇಂದ್ರ ಸರ್ಕಾರ ಆಡಳಿತ ಮಾಡಿದ ಪ್ರಧಾನಿರವರ ಏನು ಮಾಡುತ್ತಿದ್ದಾರೆ. ಎರಡು ಕೋಟಿ ಯುವಕರಿಗೆ ಪ್ರತಿವರ್ಷ ಉದ್ಯೋಗ ಸೃಷ್ಟಿ ಎಂದಿದ್ದರು 11ವರ್ಷಕ್ಕೆ 22ಕೋಟಿ ಉದ್ಯೋಗ ಲಭಿಸಬೇಕಾಗಿತ್ತು ಎಂದರು.

ನಮ್ಮ ರಾಜ್ಯದ ಬಿಜೆಪಿ ಸಂಸದರು ಪ್ರಧಾನಿ ನರೇಂದ್ರಮೋದಿರವರ ಹತ್ತಿರ ಮೌನವಾಗಿ ಇರುತ್ತಾರೆ. ಮೇ 21ರಂದು ಫೀಡಂ ಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ಮತ್ತು ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರವರು ಸಂಸದರು, ಶಾಸಕರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಬಂಡಾರಿ, ಐ.ವೈ.ಸಿ.ಕಾರ್ಯದರ್ಶಿ ತಾರೀಖ್ ಭಗವಾನ್, ಉಪಾಧ್ಯಕ್ಷರಾದ ಚೈತ್ರಾಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಹುಬಲಿ ಜೈನ್, ರಾಜ್ಯ ಕಾನೂನು ಘಟಕದ ಅಧ್ಯಕ್ಷರಾದ ಶ್ರೀಧರ್ ರಾವ್  ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments