Tuesday, May 19, 2026
Google search engine
Homeರಾಜ್ಯಮಹಿಳೆಯರಿಗೆ ಸಿಹಿಸುದ್ದಿ: ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ

ಮಹಿಳೆಯರಿಗೆ ಸಿಹಿಸುದ್ದಿ: ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 30ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.

ಈ ಮೂಲಕ ರಾಜ್ಯದ 1,24,10,668 ಮಹಿಳೆಯರಿಗೆ ತಲಾ 60,000 ರೂ. ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2000 ರೂ.ಗಳಂತೆ ಕಳೆದ ಮೂರು ವರ್ಷದಲ್ಲಿ 60,000 ರೂ.ಗಳನ್ನು ಯಾವುದೇ ಭ್ರಷ್ಟಾಚಾರ, ಕಮಿಷನ್ ಇಲ್ಲದೇ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದೆ. ರಾಜ್ಯ ಗೃಹಲಕ್ಷ್ಮಿಯರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಿಸಲು ಸಹಕಾರಿಯಾಗಿದೆ. ಕುಟುಂಬದ ದಿನನಿತ್ಯದ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಆಹಾರ ವೆಚ್ಚಗಳಿಗೆ ನೆರವಾಗುತ್ತಿದೆ. ಗ್ರಾಮೀಣ ಹಾಗೂ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೆ ಸಹಾಯವಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments