Saturday, May 23, 2026
Google search engine
Homeದೇಶಜೂನ್‌ 18ರಂದು ಕರ್ನಾಟಕ ಸೇರಿ 8 ರಾಜ್ಯಗಳ 26 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ!

ಜೂನ್‌ 18ರಂದು ಕರ್ನಾಟಕ ಸೇರಿ 8 ರಾಜ್ಯಗಳ 26 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ!

ಕರ್ನಾಟಕ ಸೇರಿದಂತೆ 8 ರಾಜ್ಯಗಳ 2 ರಾಜ್ಯಸಭಾ ಸ್ಥಾನಗಳಿಗೆ ಜೂನ್‌ 18ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ರಾಜ್ಯಸಭೆಗೆ ಮರು ಆಯ್ಕೆ ಬಯಸಿದ್ದಾರೆ.

6 ವರ್ಷಗಳ ರಾಜ್ಯಸಭಾ ಸದಸ್ಯತ್ವ ಪೂರ್ಣಗೊಂಡ 24 ಸ್ಥಾನ ಹಾಗೂ ಇಬ್ಬರು ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ಸೇರಿ ಒಟ್ಟಾರೆ 26 ಸ್ಥಾನಗಳಿಗೆ ಜೂನ್‌ ೧೮ರಂದು ಮತದಾನ ನಡೆಯಲಿದೆ.

ದೇವೇಗೌಡ, ಮಲ್ಲಿಕಾರ್ಜನ ಖರ್ಗೆ ಅಲ್ಲದೇ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌, ಕೇಂದ್ರ ಸಚಿವರಾದ ಜಾರ್ಜ್‌ ಕುರಿಯನ್‌, ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಸೇರಿದಂತೆ ಪ್ರಮುಖರ ರಾಜ್ಯಸಭಾ ಅವಧಿ ಪೂರ್ಣಗೊಂಡಿತ್ತು. ಇವರಲ್ಲಿ ಬಹುತೇಕ ಮಂದಿ ಮರು ಆಯ್ಕೆ ಬಯಸಿದ್ದಾರೆ.

ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡರಿಗೆ ಬಿಜೆಪಿ ಆಂಧ್ರಪ್ರದೇಶದಿಂದ ಮರು ಆಯ್ಕೆಯ ಬೇಡಿಕೆ ಇಟ್ಟಿತ್ತು. ಆದರೆ ಕರ್ನಾಟಕವನ್ನು ಪ್ರತಿನಿಧಿಸುವುದಾಗಿ ದೇವೇಗೌಡರು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅವರು ಈ ಬಾರಿ ಮರು ಆಯ್ಕೆ ಬಯಸಿ ಸ್ಪರ್ಧಿಸುವ ಸಾಧ್ಯತೆ ಇದೆ.

ಕರ್ನಾಟಕದ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ದೇವೇಗೌಡ, ಮಲ್ಲಿಕಾರ್ಜಿನ ಖರ್ಗೆ, ಜೆಪಿಯ ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments