Tuesday, May 26, 2026
Google search engine
Homeದೇಶಮೇಕೆದಾಟುಗೆ ವಿಜಯ್ ಕ್ಯಾತೆ: ಪ್ರಧಾನಿಗೆ ಮೊರೆ

ಮೇಕೆದಾಟುಗೆ ವಿಜಯ್ ಕ್ಯಾತೆ: ಪ್ರಧಾನಿಗೆ ಮೊರೆ

ಚೆನ್ನೈ: ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಂತೆ ಕರ್ನಾಟಕಕ್ಕೆ ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಮನವಿ ಮಾಡಿದ್ದಾರೆ.

ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಂಡ ಬೆನ್ನಲ್ಲೇ ವಿಜಯ್, ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬುಧವಾರ ದೆಹಲಿಗೆ ಭೇಟಿ ನೀಡಲಿರುವ ವಿಜಯ್ ಈ ವೇಳೆ ಮೋದಿ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ಖುದ್ದು ಮನವಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ತೀರ್ಪು ಉಲ್ಲಂಘನೆ: ವಿಜಯ್

ಮೇಕೆದಾಟು ಯೋಜನೆ ಕುರಿತು ಹೊಸ ಡಿಪಿಆರ್​ ಸಲ್ಲಿಸಲಾಗುವುದು ಎಂಬ ಕರ್ನಾಟಕ ಸರ್ಕಾರದ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್​ ವಿಜಯ್​ ಅವರು ಇದು ಸುಪ್ರೀಂ ಕೋರ್ಟ್​ ಮತ್ತು ಕಾವೇರಿ ವಿವಾದ ನ್ಯಾಯಮಂಡಳಿಯ ತೀರ್ಪಿನ ಉಲ್ಲಂಘನೆ ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಕರ್ನಾಟಕದ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್​ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಮೇಕೆದಾಟು ಯೋಜನೆ ಕುರಿತಂತೆ ಸಿಎಂ ವಿಜಯ್​ ಜಲ ತಜ್ಞರು, ಹಿರಿಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಬಳಿಕ ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕದಿಂದ ಹೊಸ ಜಲಾಶಯ ನಿರ್ಮಾಣದ ಪ್ರಸ್ತಾವನೆಯು ಸುಪ್ರೀಂ ಕೋರ್ಟ್​​ ಮತ್ತು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಸರ್ಕಾರ ಸಲ್ಲಿಸಲಿರುವ ಹೊಸ ಡಿಪಿಆರ್ ಅನ್ನು ತಿರಸ್ಕರಿಸಬೇಕು. ಸುಪ್ರೀಂ ಕೋರ್ಟ್​​ನ ಹಿಂದಿನ ತೀರ್ಪನ್ನು ಉಲ್ಲಂಘಿಸದಂತೆ ಸಲಹೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments